IND vs PAK t20; ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು (ಸೆ.28) ಭಾರತ ಮತ್ತು ಪಾಕಿಸ್ತಾನ ತಂಡಗಳು ಜಿದ್ದಾಜಿದ್ದಿನ ಪೈಪೋಟಿಗೆ ನಡೆಸಿದವು. ಪಾಕ್ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.1 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 146 ರನ್ಗಳಿಸಿತು.
ಇದನ್ನೂ ಓದಿ: ಬಿಸಿಸಿಐ ನೂತನ ಅಧ್ಯಕ್ಷ ಮಿಥುನ್ ಮನ್ಹಾಸ್ಗೆ ಸಿಗುವ ಸಂಬಳವೆಷ್ಟು? ಏನೆಲ್ಲ ಭತ್ಯೆ? ಇಲ್ಲಿದೆ ವಿವರ | BCCI President
ಇನ್ನೂ ಪಾಕಿಸ್ತಾನ ನೀಡಿದ 147 ರನ್ಗಳ ಗುರಿಬೆನ್ನಟ್ಟಿದ ಭಾರತ ಕೊನೆಯ ಓವರ್ನಲ್ಲಿ ತೀವ್ರ ಕುತೂಹಲ ಮೂಡಿಸಿ ಪಾಕ್ ವಿರುದ್ಧ ಗೆಲುವು ಸಾಧಿಸಿತು. ಭಾರತ ತಂಡವು 20 ಓವರ್‌ಗಳಲ್ಲಿ 150 ರನ್ ಗಳಿಸುವ ಮೂಲಕ ಬದ್ಧ ವೈರಿ ಪಾಕಿಸ್ತಾನದ ಎದುರು ಅದ್ಭುತ ಜಯ ಸಾಧಿಸಿತು. ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ ಏಷ್ಯಾಕಪ್ ಟ್ರೋಫಿ ಮುಡಿಗೇರಿಸಿಕೊಂಡಂತಾಯಿತು.
41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಪ್ರಸ್ತುತ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ 3ನೇ ಸಲ ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು. ಪಂದ್ಯದಲ್ಲಿ ಆರಂಭಿಕ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದರೂ ಸಹ ಭಾರತದ ಮುಂದೆ ಬೃಹತ್ ಮೊತ್ತ ಕಲೆಹಾಕಲು ಪಾಕಿಸ್ತಾನ ತಂಡಕ್ಕೆ ಸಾಧ್ಯವಾಗಲಿಲ್ಲ. ಇನ್ನೂ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯಿತು.
(ಏಜೆನ್ಸೀಸ್)