ಕ್ರೀಡೆ

ಟಾಸ್​ ಗೆದ್ದ ಸೌತ್ ಆಫ್ರಿಕಾ; ಸರಣಿ ಗೆಲ್ಲುವ ತವಕದಲ್ಲಿ ಭಾರತ

ಗುವಾಹಟಿ: ಭಾರತ - ಸೌತ್ ಆಫ್ರಿಕಾ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ತಂಡ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ದಿನೇಶ್ ಕಾರ್ತಿಕ್​ ಹಾಗೂ ರಿಷಬ್ ಪಂತ್​ ನಡುವೆ ವಿಕೆಟ್ ಕೀಪರ್ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿತ್ತು. ಇದೀಗ ಹಾರ್ದಿಕ್ ಪಾಂಡ್ಯಾಗೆ ವಿಶ್ರಾಂತಿ ನೀಡಿರುವುದರಿಂದ ಅವರ ಸ್ಥಾನದಲ್ಲಿ ರಿಷಬ್ ಪಂತ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಮೊದಲ ಪಂದ್ಯ ಗೆದ್ದುಕೊಂಡು, ವಿಶ್ವಾಸದಲ್ಲಿರುವ ಭಾರತ ತಂಡ ಸೌತ್​ ಆಫ್ರಿಕಾವನ್ನು ಸೋಲಿಸುವ ಮೂಲಕ ಸರಣಿ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡಿದೆ. ಸ್ಪಿನ್ ವಿಭಾಗದಲ್ಲಿ ಅನುಭವಿ ಆಟಗಾರ ಅಶ್ವಿನ್ ಅವಕಾಶ ಉಳಿಸಿಕೊಂಡಿದ್ದು, ಯಜುವೇಂದ್ರ ಚಹಲ್ ಅವಕಾಶವಂಚಿತರಾಗಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹರ್, ಆರ್ಶದೀಪ್ ಸಿಂಗ್.

ಸೌತ್​ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್, ರಿಲೀ ರೋಸೌ, ಏಡನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಟಿಸ್ಟಾನ್ ಸ್ಟಬ್ಸ್, ಮಾರ್ಕೋ ಜಾನ್ಸೆನ್, ಕಗಿಸೊ ರಬಾಡ, ತಬರೇಜ್ ಶಮ್ಸಿ, ಅನ್ರಿಚ್ ನೋಕಿಯ.