ಕ್ರೀಡೆ

ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್​; ನಿರೀಕ್ಷೆಯಂತೆ ಟೀಮ್​ ಇಂಡಿಯಾದಲ್ಲಿ ಬದಲಾವಣೆ, ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

ಕಟಕ್​: ಇಲ್ಲಿನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ಇಂಗ್ಲೆಂಡ್ (England) ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ತಂಡವು ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಉಭಯ ತಂಡಗಳಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಕಟಕ್​ನ ಬಾರಾಬತಿ ಕ್ರೀಡಾಂಗಣದಲ್ಲಿ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಪಂದ್ಯವನ್ನು ಗೆದ್ದು ಟೀಮ್​ ಇಂಡಿಯಾ ಸರಣಿಯನ್ನು ವಶಪಡಿಸಿಕೊಳ್ಳುವ ಹಂಬಲದಲ್ಲಿದೆ. ಇನ್ಣೂ ಮೊದಲ ಪಂದ್ಯದ ಸೋಲಿನಿಂದ ಹೊರಬಂದು ಸರಣಿಯಲ್ಲಿ 1-1 ಅಂತಕರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಇಂಗ್ಲೆಂಡ್ ಕಣಕ್ಕಿಳಿಯುತ್ತಿದ್ದು, ಪಂದ್ಯದ ಮೇಲೆ ಕ್ರೀಡಾಭಿಮಾನಿಗಳು ಸಾಕಷ್ಟು ನಿರೀಕ್ಷೆ ಇರಿಸಿದ್ದಾರೆ.

ಮುಂಬರುವ ಚಾಂಪಿಯನ್ಸ್​ ಟ್ರೋಫಿ ನಿಟ್ಟಿನಲ್ಲಿ ಉಭಯ ತಂಡಗಳಿಗು ಈ ಪಂದ್ಯ ಮಹತ್ವದಾಗಿದ್ದು, ಸರಣಿಯಲ್ಲಿ ಗೆಲ್ಲುವ ಮೂಲಕ ಟೂರ್ನಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುವ ಇರಾದೆಯಲ್ಲಿವೆ. ಇನ್ನೂ ಆಡುವ 11ರ ಬಳಗದ ವಿಚಾರಕ್ಕೆ ಬರುವುದಾದರೆ ಉಭಯ ತಂಡಗಳಲ್ಲೂ ಬದಲಾವಣೆ ಮಾಡಲಾಗಿದ್ದು, ನಿರೀಕ್ಷೆಯಂತೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಯಶಸ್ವಿ ಜೈಸ್ವಲ್ ಬದಲಿಗೆ ವಿರಾಟ್​ ಕೊಹ್ಲಿ, ಕುಲ್​ದೀಪ್​ ಯಾದವ್ ಬದಲಿಗೆ ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೂ ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ಮಾರ್ಕ್ ವುಡ್​, ಗಸ್ ಆ್ಯಟ್ಕಿನ್​ಸನ್​ ಹಾಗೂ ಜೇಮಿ ಓವರ್​ಟನ್​ ಸ್ಥಾನ ಪಡೆದಿದ್ದಾರೆ.

ಟೀಮ್​ ಇಂಡಿಯಾ ಪ್ಲೇಯಿಂಗ್​ 11  

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.

ಇಂಗ್ಲೆಂಡ್ ಪ್ಲೇಯಿಂಗ್​ 11 

ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.