ನವ ದೆಹಲಿ: ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟವಾಗಿದೆ. ಅನುಭವಿ ಬ್ಯಾಟ್ಸ್ಮನ್ ಶಿಖರ್ ಧವನ್ಗೆ ತಂಡದ ನಾಯಕತ್ವ ಜವಾಬ್ದಾರಿ ವಹಿಸಲಾಗಿದೆ. ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಟಿ-20ಸರಣಿಯಲ್ಲಿ ಆಡಿದ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಯುವ ಆಟಗಾರರ ತಂಡವನ್ನು ಆಯ್ಕೆ ಮಾಡಲಾಗಿದೆ.
ಭಾರತ ತಂಡ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪ ನಾಯಕ), ಋತುರಾಜ್ ಗಾಯಖ್ವಾಡ್, ಶುಭಮನ್ ಗಿಲ್, ರಜತ್ ಪಾಟೀದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹ್ಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಮುಖೇಶ್ ಕುಮಾರ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.
ಟಿ-20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಹೀಗಾಗಿ ಆಟಗಾರರ ಫಿಟ್ನೆಸ್ ಹಾಗೂ ವಿಶ್ರಾಂತಿಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಹೀಗಾಗಿ ಯುವ ಆಟಗಾರರನ್ನು ಅನುಭವಿ ಶಿಖರ್ ಧವನ್ ಮುನ್ನಡೆಸಬೇಕಾಗಿದೆ. ಶ್ರೇಯಸ್ ಅಯ್ಯರ್ಗೆ ಉಪನಾಯಕನ ಜವಾಬ್ದಾರಿ ವಹಿಸಲಾಗಿದೆ.