ಮುಂಬೈ: ಆರಂಭಿಕ ಜೋಸ್ ಬಟ್ಲರ್ (116 ರನ್, 65 ಎಸೆತ, 9 ಬೌಂಡರಿ, 9 ಸಿಕ್ಸರ್) ಹಾಗೂ ಕನ್ನಡಿಗ ದೇವದತ್ ಪಡಿಕಲ್ (54ರನ್, 35 ಎಸೆತ, 7 ಬೌಂಡರಿ, 2 ಸಿಕ್ಸರ್) ಜೋಡಿಯ ಸ್ಫೋಟಕ ಬ್ಯಾಟಿಂಗ್ ಹಾಗೂ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ (22ಕ್ಕೆ 3) ಮಾರಕ ದಾಳಿ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್-15ರ ಪಂದ್ಯದಲ್ಲಿ ಡೆಲ್ಲಿ ಕ್ಯಾಟಪಿಲ್ಸ್ ತಂಡವನ್ನು 15 ರನ್‌ಗಳಿಂದ ಸೋಲಿಸಿತು. ಇದರಿಂದ ಟೂರ್ನಿಯಲ್ಲಿ ಸತತ 2ನೇ ಹಾಗೂ ಒಟ್ಟಾರೆ 5ನೇ ಗೆಲುವು ದಾಖಲಿಸಿದ ಸಂಜು ಸ್ಯಾಮ್ಸನ್ ಬಳಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ, ಬಟ್ಲರ್-ಪಡಿಕಲ್ ಸಾಹಸದ ಬಳಿಕ ಸ್ಲಾಗ್ ಓವರ್‌ಗಳಲ್ಲಿ ನಾಯಕ ಸಂಜು ಸ್ಯಾಮ್ಸನ್ (46*ರನ್, 19 ಎಸೆತ, 5 ಬೌಂಡರಿ, 3 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಲವಾಗಿ 2 ವಿಕೆಟ್‌ಗೆ 222 ರನ್ ಕಲೆಹಾಕಿತು. ಪ್ರತಿಯಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್‌ಗೆ 207 ರನ್ ಗಳಿಸಿ ಸೋಲೊಪ್ಪಿಕೊಂಡಿತು.