ಮುಂಬೈ: ಗೆಲುವಿನ ಖಾತೆ ತೆರೆಯುವ ಹಂಬಲದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮೊದಲ ಗೆಲುವಿನ ಸವಿ ಕಂಡಿರುವ ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಲಖನೌ ಸೂಪರ್‌ಜೈಂಟ್ಸ್ ತಂಡಗಳು ಐಪಿಎಲ್-15ರ ಪಂದ್ಯದಲ್ಲಿ ಸೋಮವಾರ ಎದುರಾಗಲಿವೆ. ಮೊದಲ ಪಂದ್ಯದಲ್ಲಿ ನಿರಾಸೆ ಕಂಡ ಬಳಿಕ ಎರಡನೇ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಎಲ್‌ಎಸ್‌ಜಿ ಗೆಲುವಿನ ಹಳಿಗೇರಿದೆ. ಸಿಎಸ್‌ಕೆ ನೀಡಿದ ಬೃಹತ್ ಮೊತ್ತ ಬೆನ್ನಟ್ಟಿದ ವಿಶ್ವಾಸದಲ್ಲಿರುವ ರಾಹುಲ್ ಪಡೆ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ. ಆಲ್ರೌಂಡರ್ ಜೇಸನ್ ಹೋಲ್ಡರ್ ಆಗಮನದಿಂದಾಗಿ ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
ಟೀಮ್ ನ್ಯೂಸ್: ಲಖನೌ ಸೂಪರ್‌ಜೈಂಟ್ಸ್: ಆಲ್ರೌಂಡರ್ ಜೇಸನ್ ಹೋಲ್ಡರ್ ತಂಡ ಕೂಡಿಕೊಂಡಿದ್ದಾರೆ. ಇದರಿಂದ ಆರಂಭಿಕ 2 ಪಂದ್ಯಗಳಲ್ಲಿ ಕೇವಲ 3 ವಿದೇಶಿಗರೊಂದಿಗೆ ಆಡಿದ್ದ ಎಲ್‌ಎಸ್‌ಜಿ, ಇದೀಗ 4 ವಿದೇಶಿ ಕೋಟಾವನ್ನು ಭರ್ತಿ ಮಾಡಿಕೊಳ್ಳಲಿದೆ.
ಸನ್‌ರೈಸರ್ಸ್: ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿದರೂ ಹಿಂದಿನ ಪಂದ್ಯದಲ್ಲಿ ಆಡಿದ ತಂಡವನ್ನೇ ಮತ್ತೊಮ್ಮೆ ಕಣಕ್ಕಿಳಿಸಬಹುದು. ಕನ್ನಡಿಗರಾದ ಶ್ರೇಯಸ್ ಗೋಪಾಲ್ ಹಾಗೂ ಜೆ.ಸುಚಿತ್ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.
ಪಂದ್ಯ ಆರಂಭ: ರಾತ್ರಿ 7.30ಕ್ಕೆ
ನೇರಪ್ರಸಾರ : ಸ್ಟಾರ್ ಸ್ಪೋರ್ಟ್ಸ್