ಕ್ರೀಡೆ

CSK ವಿರುದ್ಧದ ಪಂದ್ಯಕ್ಕೂ ಮುನ್ನ ತಿಮ್ಮಪ್ಪನ ಮೊರೆ ಹೋದ ಪಾಟಿದಾರ್​: ಶ್ರೇಯಾಂಕ​, ಜಿತೇಶ್​ ಶರ್ಮ ಸಾಥ್​! RCB

RCB : ಪ್ರಸಕ್ತ ಐಪಿಎಲ್​ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB ) ತಂಡ ಗೆಲುವಿನ ಓಟ ಮುಂದುವರಿಸಿದೆ. ಇಲ್ಲಿಯವರೆಗೆ 10 ಪಂದ್ಯಗಳನ್ನು ಆಡಿರುವ ಆರ್‌ಸಿಬಿ, 7 ಗೆಲುವುಗಳೊಂದಿಗೆ 14 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿ ಮೇ 3ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತಮ್ಮ ಮುಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ( CSK ) ತಂಡವನ್ನು ಎದುರಿಸಲಿದೆ.

ಈ ಹೈವೋಲ್ಟೇಜ್​ ಪಂದ್ಯಕ್ಕೆ ಮೂರು ದಿನಗಳು ಬಾಕಿ ಇರುವಾಗ, ಆರ್‌ಸಿಬಿ ನಾಯಕ ರಜತ್​ ಪಾಟೀದಾರ್​, ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಬುಧವಾರ ತಮ್ಮ ತಂಡದ ಸಹ ಆಟಗಾರ ಜಿತೇಶ್ ಶರ್ಮಾ ಮತ್ತು ಟೀಮ್ ಇಂಡಿಯಾ ಮಹಿಳಾ ಕ್ರಿಕೆಟರ್​ ಶ್ರೇಯಾಂಕ ಪಾಟೀಲ್ ಅವರೊಂದಿಗೆ ತಿರುಮಲಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ದರ್ಶನದ ನಂತರ, ರಂಗನಾಯಕಕುಲ ಮಂಟಪದಲ್ಲಿ ಕ್ರಿಕೆಟಿಗರನ್ನು ಪಂಡಿತರು ಆಶೀರ್ವದಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮೊದಲ ಬಾರಿಗೆ ಆರ್‌ಸಿಬಿ ನಾಯಕನಾಗಿ ಅಧಿಕಾರ ವಹಿಸಿಕೊಂಡಿರುವ ಪಾಟಿದಾರ್ ತಂಡವನ್ನು ಅದ್ಭುತವಾಗಿ ಮುನ್ನಡೆಸುತ್ತಿದ್ದಾರೆ.

ಪಾಟಿದಾರ್ ತಮ್ಮ ಬ್ಯಾಟಿಂಗ್ ಮತ್ತು ನಾಯಕತ್ವದಿಂದ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರ ಜೊತೆಗೆ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಸತತ ಅರ್ಧಶತಕಗಳೊಂದಿಗೆ ಆರ್‌ಸಿಬಿಯ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮುಂದಿನ ಎರಡು ಪಂದ್ಯಗಳಲ್ಲಿ ಬೆಂಗಳೂರು ಗೆದ್ದರೆ, ತಮ್ಮ ಪ್ಲೇ-ಆಫ್ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ.

ಸಿಎಸ್​ಕೆ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿಯ ಅಂತಿಮ ತಂಡ (ಅಂದಾಜು)

ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.