ನವದೆಹಲಿ: ಇತ್ತೀಚೆಗೆ ಮುಕ್ತಾಯವಾದ ಫಿಫಾ ವಿಶ್ವಕಪ್ನಲ್ಲಿ ಅರ್ಜೆಂಟೀನಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅರ್ಜೆಂಟೀನಾ ಪ್ರಶಸ್ತಿ ಗೆಲ್ಲುವಲ್ಲಿ ತಂಡದ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ಸ್ಟಾರ್ ಆಟಗಾರರಾಗಿರುವ ಮೆಸ್ಸಿಗೆ ವಿಶ್ವದಾದ್ಯಂತ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇದೀಗ ಲಿಯೋನಲ್ ಮೆಸ್ಸಿ, ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಧರಿಸಿದ ತಮ್ಮ ಜೆರ್ಸಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಅವರಿಗೆ ಉಡುಗೊರೆಯಾಗಿ ಲಭಿಸಿರುವ ಮೆಸ್ಸಿ ಧರಿಸಿರುವ ಜೆರ್ಸಿಯ ಫೋಟೋವನ್ನು ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಸ್ಟಾರ್ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ, ಜಯ್ ಷಾ ಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಪ್ರಗ್ಯಾನ್ ಓಜಾ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು 'GOAT' ಸಹಿ ಮಾಡಿರುವ ಜೆರ್ಸಿ ಉಡುಗೊರೆಯಾಗಿ ಲಭಿಸಿದೆ. ಜಯ್ ಭಾಯ್ಗೆ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. (ಏಜೆನ್ಸೀಸ್)