ಕರ್ನಾಟಕ ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ ವಿಜಯವಾಣಿ
ಕ್ರೀಡೆ

ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿ ಗುಣರಂಜನ್‌ಶೆಟ್ಟಿ ಮರು ಆಯ್ಕೆ

ಕರ್ನಾಟಕ ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಸೋಮವಾರ ನಡೆದ ಸಂಸ್ಥೆಯ 2026-30ರ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಅವರು 2ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರು: ಕರ್ನಾಟಕ ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಸೋಮವಾರ ನಡೆದ ಸಂಸ್ಥೆಯ 2026-30ರ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಅವರು 2ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು.

ಹಿರಿಯ ಉಪಾಧ್ಯಕ್ಷರಾಗಿ ನಿತ್ಯಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಸಾದ್‌ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಜೆ. ಶ್ರೀನಿವಾಸ, ಖಜಾಂಚಿಯಾಗಿ ಶ್ರೀನಿವಾಸ ಅಂಗಾರಕೋಡಿ ಆಯ್ಕೆಯಾಗಿದ್ದಾರೆ. ಈ ಕುರಿತು ರೆಸ್ಲಿಂಗ್ ಫೆಡರೇಷನ್ ಆ್ ಇಂಡಿಯಾ (ಡಬ್ಲ್ಯುಎ್ಐ) ಅಧ್ಯಕ್ಷ ಸಂಜಯ್ ಸಿಂಗ್ ಚುನಾವಣಾ ಫಲಿತಾಂಶದ ಮಾಹಿತಿ ನೀಡಿದರು. ರಾಜ್ಯದಲ್ಲಿ ಇನ್ನಷ್ಟು ಕುಸ್ತಿ ಕ್ರೀಡೆಯನ್ನು ಸಂಘಟಿತವಾಗಿ ಬೆಳೆಸುವುದು, ಜಿಲ್ಲಾ, ಗ್ರಾಮೀಣ ಮಟ್ಟದಲ್ಲಿ ಪ್ರತಿಭಾವಂತ ಕುಸ್ತಿಪಟುಗಳ ಗುರುತಿಸುವಿಕೆ, ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಸ್ಪರ್ಧೆ, ತರಬೇತಿ ಅವಕಾಶ ಕಲ್ಪಿಸುವುದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಗರಿಮೆ ಹೆಚ್ಚಿಸುವುದು ನಮ್ಮ ಆದ್ಯತೆಯಾಗಿದೆ.

ಕರ್ನಾಟಕಕ್ಕೆ ಕುಸ್ತಿಯ ಗಟ್ಟಿಯಾದ ಪರಂಪರೆ ಇದೆ. ಅದನ್ನು ಆಧುನಿಕ ಸ್ಪರ್ಧಾತ್ಮಕ ಕುಸ್ತಿಯೊಂದಿಗೆ ಜೋಡಿಸಿ ಹೊಸ ಪೀಳಿಗೆಯ ಕ್ರೀಡಾಪಟುಗಳನ್ನು ರೂಪಿಸಲಾಗುವುದು ಎಂದು ಬೆಳ್ಳಿಪ್ಪಾಡಿ ಗುಣರಂಜನ್‌ಶೆಟ್ಟಿ ತಿಳಿಸಿದ್ದಾರೆ.