ಬೆಂಗಳೂರು: ಇತ್ತೀಚೆಗೆ ಖೋಖೋ ವಿಶ್ವಕಪ್ ಗೆದ್ದ ಭಾರತದ ಪುರುಷರ ಮತ್ತು ಮಹಿಳಾ ತಂಡದ ಸದಸ್ಯರಾದ ಮಂಡ್ಯ ಜಿಲ್ಲೆ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಎಂ.ಕೆ. ಮತ್ತು ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಬಿ. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಜತೆಗೆ ಇಬ್ಬರು ಕ್ರೀಡಾಪಟುಗಳಿಗೂ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದರು.
ಸಚಿವ ಚಲುವರಾಯಸ್ವಾಮಿ ಮತ್ತು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಉಪಸ್ಥಿತರಿದ್ದರು.