ಕ್ರೀಡೆ

ಮಂಗಳೂರಿನ ಕಿರಣ್ ಪೈ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು: ಕೋಲಾರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನಲ್ಲಿ ಮೂರು ವಿಭಾಗದಲ್ಲಿ ಪದಕ ಜಯಿಸಿದ ಮಂಗಳೂರಿನ ಕಿರಣ್ ಪೈ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 35 ವಯೋಮಿತಿ ವಿಭಾಗದ ಡಿಸ್ಕಸ್ ಥ್ರೋನಲ್ಲಿ ಕಿರಣ್ ಪೈ ಚಿನ್ನ, ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಇವರು ಮಂಗಳೂರು ವಿಜಯವಾಣಿ ಪತ್ರಿಕೆಯ ಸಿಬ್ಬಂದಿ. ಕಳೆದ ನವೆಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನಲ್ಲಿ ಇವರು ಹ್ಯಾಮರ್ ಎಸೆತದಲ್ಲಿ ಚಿನ್ನ, ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ, ಜಾವೆಲಿನ್‌ನಲ್ಲಿ ಕಂಚಿನ ಪದಕ ಪಡೆದಿದ್ದರು.