ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಭಾರತ ತಂಡವನ್ನು ಪ್ರಕಟಿಸಿದೆ. ಐಪಿಎಲ್ ವೇಳೆ ಗಾಯಗೊಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ಕೆ.ಎಲ್.ರಾಹುಲ್ ಬದಲಿಗೆ ಇಶಾನ್ ಕಿಶನ್ಗೆ ಆಯ್ಕೆ ಸಮಿತಿ ಮಣೆ ಹಾಕಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯಲಿದ್ದು, ಜೂನ್ 7 ರಿಂದ ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ಪಂದ್ಯ ಆರಂಭವಾಗಲಿದೆ. ಇದೀಗ ಬಿಸಿಸಿಐ ಬಿಡುಗಡೆ ಮಾಡಿರುವ ತಂಡ ಇಂತಿದೆ.
ಇದನ್ನೂ ಓದಿ: ಆರ್ಸಿಬಿ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).
ಋತುರಾಜ್ ಗಾಯಕ್‌ವಾಡ್, ಮುಖೇಶ್ ಕುಮಾರ್ ಮತ್ತು ಸೂರ್ಯಕುಮಾರ್ ಯಾದವ್.
ನಿರೀಕ್ಷೆಯಂತೆಯೇ ಅನುಭವಿ ಬ್ಯಾಟ್ಸ್ಮನ್ ಅಜಿಂಕ್ಯಾ ರಹಾನೆ ಟೆಸ್ಟ್ ತಂಡಕ್ಕೆ ಮರು ಆಯ್ಕೆಯಾಗಿದ್ದಾರೆ. ಕಳಪೆ ಪ್ರದರ್ಶನದ ಕಾರಣದಿಂದ ಉಪನಾಯಕನಾಗಿದ್ದ ರಹಾನೆ ತಂಡದಿಂದ ಹೊರಗುಳಿದ್ದರು. ಇದೀಗ ದೇಶೀಯ ಟೂರ್ನಿ ಹಾಗೂ ಐಪಿಎಲ್ನಲ್ಲಿ ನೀಡಿರುವ ಉತ್ತಮ ನಿರ್ವಹಣೆಯಿಂದಾಗಿ ಮರಳಿ ಫಾರ್ಮ್ಗೆ ಬಂದಿದ್ದು, ಟೆಸ್ಟ್ ತಂಡಕ್ಕೆ ಆಯ್ಕೆ ಆಗಿದ್ದಾರೆ. (ಏಜೆನ್ಸೀಸ್)