RCB :ಇಂಡಿಯನ್ ಪ್ರೀಮಿಯರ್ ಲೀಗ್(IPL 2025)ನ 18ನೇ ಆವೃತ್ತಿಯ ಕ್ವಾಲಿಫೈಯರ್-1ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿದ ಆರ್‌ಸಿಬಿ ತಂಡ 9 ವರ್ಷಗಳ ಬಳಿಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಮೂಲಕ 18 ವರ್ಷಗಳ ಕಪ್ ನಿಗಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ. ಇದೀಗ ದೇಶಾದ್ಯಂತ ಆರ್‌ಸಿಬಿ ಅಭಿಮಾನಿಗಳಿಂದ ಸಂತಸ ವ್ಯಕ್ತವಾಗುತ್ತಿದೆ. ಇದರ ನಡುವೆ ಆರ್‌ಸಿಬಿ ಪ್ರಾಂಚೈಸಿ ಸಂಸ್ಥಾಪಕ, ಮಾಜಿ ಮಾಲೀಕ ವಿಜಯ್ ಮಲ್ಯ RCB ತಂಡಕ್ಕೆ ಶುಭ ಕೋರಿದ್ದಾರೆ.
ನಾಲ್ಕನೇ ಬಾರಿಗೆ ಫೈನಲ್‌ಗೆ
ಏತನ್ಮಧ್ಯೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವರ್ಷಗಳ ನಂತರ ಐಪಿಎಲ್ ಫೈನಲ್ ತಲುಪಿತು. 2016 ರಲ್ಲಿ ಕೊನೆಯ ಬಾರಿಗೆ ಫೈನಲ್ ತಲುಪಿತ್ತು. ಆರ್‌ಸಿಬಿ ಐಪಿಎಲ್‌ನಲ್ಲಿ ನಾಲ್ಕನೇ ಬಾರಿಗೆ ಫೈನಲ್ ತಲುಪಿರುವುದು ಗಮನಾರ್ಹ. 2009, 2011, 2016 ಮತ್ತು 2025 ರ ಆವೃತ್ತಿಗಳಲ್ಲಿ ಫೈನಲ್‌ಗೆ ತಲುಪಿದೆ. ಆದರೆ ಕಳೆದ ಮೂರು ಬಾರಿಯೂ ಅದು ರನ್ನರ್ ಅಪ್ ಸ್ಥಾನದಲ್ಲಿದೆ. ಆದರೆ, ಈ ಬಾರಿ ಯಾವುದೇ ಬೆಲೆ ತೆತ್ತಾದರೂ ಪ್ರಶಸ್ತಿ ಗೆಲ್ಲಲೇಬೇಕೆಂದು ತಂಡ ದೃಢನಿಶ್ಚಯ ಮಾಡಿದಂತಿದೆ.
ಇದನ್ನೂ ಓದಿ:ಇನ್ನೂ ಮುಗಿದಿಲ್ಲ… ಆರ್‌ಸಿಬಿ ಅಭಿಮಾನಿಗಳಿಗೆ ವಿಶೇಷ ಕರೆ ನೀಡಿದ ಕ್ಯಾಪ್ಟನ್ ರಜತ್ ಪಾಟಿದಾರ್! Rajat Patidar
ವಿಜಯ್ ಮಲ್ಯ ಹೇಳಿದ್ದೇನು..?
ಪಿಬಿಕೆಎಸ್ ವಿರುದ್ಧ ಅದ್ಭುತ ಗೆಲುವು ಸಾಧಿಸಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದ್ದಕ್ಕಾಗಿ ಆರ್‌ಸಿಬಿಗೆ ಅಭಿನಂದನೆಗಳು. ಹೆಚ್ಚಿನ ಒತ್ತಡದ ಸ್ಪರ್ಧೆಯಲ್ಲಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ. ಪ್ರಶಸ್ತಿಯತ್ತ ಮುಂದುವರಿಯಿರಿ ಎಂದು ಹಂಚಿಕೊಂಡಿದ್ದಾರೆ.
ವಿಜಯ್ ಮಲ್ಯ ಆಹ್ವಾನಿಸಿದ ಅಭಿಮಾನಿಗಳು ಆರ್‌ಸಿಬಿ ಫ್ರಾಂಚೈಸಿಯನ್ನು ಆರಂಭಿಕ ಹಂತದಲ್ಲಿ ಕಟ್ಟಿ ಬೆಳೆಸಿದ ವಿಜಯ್ ಮಲ್ಯ ಇದೀಗ ಟ್ರೋಫಿ ಗೆಲುವು ನೋಡಬೇಕು. ಹೀಗಾಗಿ ಅಹಮ್ಮದಾಬಾದ್‌ನಲ್ಲಿ ಜೂನ್ 3 ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ವೀಕ್ಷಿಸಲು ವಿಜಯ್ ಮಲ್ಯಗೆ ಅಭಿಮಾನಿಗಳು ಆಹ್ವಾನ ನೀಡಿದ್ದಾರೆ. ಇದೆ ವೇಳೆ ಮಲ್ಯ ವಿರುದ್ಧ ಟ್ವೀಟ್ ಮಾಡಿದ್ದಾರೆ. ಐಪಿಎಲ್ ಫೈನಲ್ ಪಂದ್ಯಕ್ಕೆ ಬನ್ನಿ, ಹೇಗೋ ಆರ್‌ಸಿಬಿ ಫೈನಲ್ ಗೆಲ್ಲುತ್ತೆ. ಎಲ್ಲಾ ಸಾಲ ತೀರಿಸಿಬಿಡಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.(ಏಜೆನ್ಸೀಸ್)