ನಾಗ್ಪುರ: ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಶಮಿ 37ರನ್ ಗಳಿಸಿದರು. ಈ ವೇಳೆ ಭರ್ಜರಿ ಮೂರು ಸಿಕ್ಸರ್ ಸಿಡಿಸಿ ಮಿಂಚಿದರು. ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ ಒಟ್ಟು 25 ಸಿಕ್ಸರ್ ಸಿಡಿಸಿದ್ದರೆ. ಕೊಹ್ಲಿ 24 ಸಿಕ್ಸರ್ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ 21 ಹಾಗೂ, ಹಾಲಿ ಉಪನಾಯಕ ಕೆ.ಎಲ್.ರಾಹುಲ್ 17 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ನಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಸಹಿತ 132ರನ್‌ಗಳ ಗೆಲವು ದಾಖಲಿಸಿಕೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳ ಮುನ್ನಡೆ ಸಾಧಿಸಿದ ಭಾರತ, ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 91 ರನ್‌ಗಳಿಗೆ ಆಲ್ಔಟ್ ಮಾಡುವಲ್ಲಿ ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಪಡೆ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. (ಏಜೆನ್ಸೀಸ್)