ಕ್ರೀಡೆ

ಚೆನ್ನೈ ವಿರುದ್ಧ 9 ವಿಕೆಟ್‌ಗಳ ಗೆಲುವು ಸಾಧಿಸಿದ ಮುಂಬೈ| Ipl

IPL: ಐಪಿಎಲ್ 2025 ರ 38 ನೇ ಪಂದ್ಯ ಇಂದು (20) ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.

177 ರನ್ ಗುರಿ ಪಡೆದ ಮುಂಬೈ ಇಂಡಿಯನ್ಸ್ ಕೇವಲ 1 ವಿಕೆಟ್ ಕಳೆದುಕೊಂಡು ಇನ್ನೂ 26 ಎಸೆತಗಳು ಬಾಕಿ ಉಳಿದಿರುವಂತೆ ಜಯಭೇರಿ ಬಾರಿಸಿತು.

ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕಗಳ ನೆರವಿನಿಂದ ಮುಂಬೈ ತಂಡವು ಚೆನ್ನೈ ನಿಗದಿಪಡಿಸಿದ 176 ರನ್‌ಗಳ ಗುರಿಯನ್ನು ಸುಲಭವಾಗಿ ತಲುಪಿತು.

ಇದೀಗ ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಭರ್ಜರಿ ಬ್ಯಾಟಿಂಗ್​ನಿಂದಾಗಿ ಚೆನ್ನೈ ವಿರುದ್ಧ ತವರಿನಲ್ಲಿ ಮುಂಬೈ ಇಂಡಿಯನ್ಸ್‌ಗೆ 9 ವಿಕೆಟ್‌ಗಳ ಭರ್ಜರಿ ಗೆಲುವು ಸಿಕ್ಕಿದೆ.