ಕ್ರೀಡೆ

ಪಂಜಾಬ್ ತಂಡಕ್ಕೆ ಸತತ 2ನೇ ಸೋಲು; ಗೆದ್ದು ಬೀಗಿದ ಹಾಲಿ ಚಾಂಪಿಯನ್ಸ್

ಅಬುಧಾಬಿ: ಆಲ್ರೌಂಡ್ ನಿರ್ವಹಣೆ ಮೂಲಕ ಗಮನಸೆಳೆದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್-13ರ ತನ್ನ 4ನೇ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿತು. ಶೇಖ್ ಜಯೆದ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮ (70 ರನ್, 45 ಎಸೆತ, 8 ಬೌಂಡರಿ, 3 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಪ್ರತಿಹೋರಾಟದ ಲವಾಗಿ ಮುಂಬೈ ತಂಡ ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 48 ರನ್‌ಗಳಿಂದ ಮಣಿಸಿತು. ಕಳೆದ ಪಂದ್ಯದಲ್ಲಿ ಆರ್‌ಸಿಬಿ ಎದುರು ಸೂಪರ್ ಓವರ್‌ನಲ್ಲಿ ಸೋಲು ಕಂಡಿದ್ದ ಮುಂಬೈ ಗೆಲುವಿನ ಹಳಿ ಏರಲು ಸಲವಾದರೆ, ಪಂಜಾಬ್ ತಂಡ ಸತತ 2ನೇ ಸೋಲು ಕಂಡಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ 4 ವಿಕೆಟ್‌ಗೆ 191 ರನ್ ಪೇರಿಸಿತು. ಪ್ರತಿಯಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 8 ವಿಕೆಟ್‌ಗೆ 143 ರನ್ ಗಳಿಸಲಷ್ಟೇ ಶಕ್ತವಾಯಿತು.