ನವದೆಹಲಿ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಹಾಗೂ ಇತ್ತೀಚೆಗೆ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವಲಿನ್ ಥ್ರೋ ಫೈನಲ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದ ಚಿನ್ನದ ಹುಡುಗ ನೀರಜ್ ಛೋಪ್ರಾ ಇದೀಗ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾಗಿಯಾಗುವುದು ಅನುಮಾನವಾಗಿದೆ.
ಸದ್ಯ ನೀರಜ್ ಅವರ ಮುಂದಿನ ಕನಸು ಕಾಮನ್ವೆಲ್ತ್ ಗೇಮ್ಸ್ ಆಗಿತ್ತು. ಮತ್ತೆ ಚಿನ್ನದ ಪದಕ ಪಡೆಯುವ ನಿರೀಕ್ಷೆಯಲ್ಲಿದ್ದ ನೀರಜ್ ಇದೀಗ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡು ಬೆಳ್ಳಿ ಪದಕ ಪಡೆದಿದ್ದ ನೀರಜ್ಗೆ ಗಾಯವಾಗಿದ್ದು, ಸದ್ಯ ಮುಂದಿನ ಕಾಮನ್ವೆಲ್ತ್ ಗೇಮ್ನಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಇಂಡಿಯನ್ ಒಲಂಪಿಕ್ ಅಸೋಸಿಯೇಷನ್ನ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.
ಸದ್ಯ ನೀರಜ್ಗೆ ವಿಶ್ರಾಂತಿಯ ಅಗತ್ಯವಿದ್ದು, ಗಾಯಗೊಂಡಿರುವುದರಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. (ಏಜೆನ್ಸೀಸ್)