ನವದೆಹಲಿ: ವೆಸ್ಟ್ ಇಂಡೀಸ್ ನ ಪವರ್ ಹಿಟ್ಟರ್ ನಿಕೋಲಸ್ ಪೂರನ್ ಟಿ-20 ಕ್ರಿಕೆಟ್ ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪೂರನ್ ಪಾತ್ರರಾಗಿದ್ದಾರೆ.
ಇದನ್ನೂ ಓದಿ: ‘ಸಾಮಾನ್ಯ ವ್ಯಕ್ತಿಯಂತೆ ಕಂಡರೂ ರೋಹಿತ್ ಅದ್ಭುತ ಆಟಗಾರ’: ಮರೆಗುಳಿ ಎಂದವರಿಗೆ ಖ್ಯಾತ ಅಂಪೈರ್ ತಿರುಗೇಟು
ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ಪರ ಆಡುತ್ತಿರುವ ಪೂರನ್, ಸೇಂಟ್ ಕಿಟ್ಸ್ ನೆವಿಸ್ ಪೇಟ್ರಿಯಾಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿದೆದ್ದಿದ್ದಾರೆ. ಅವರು 43 ಎಸೆತಗಳಲ್ಲಿ 7 ಬೌಂಡರಿ ಹಾಗೂ 9 ಸಿಕ್ಸರ್‌ಗಳ ನೆರವಿನಿಂದ 97 ರನ್ ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಪೂರನ್ ವೆಸ್ಟ್ ಇಂಡೀಸ್ ಬ್ಯಾಟಿಂಗ್ ದಂತಕಥೆ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿದಿದ್ದು ಗಮನಾರ್ಹ ಸಂಗತಿಯಾಗಿದೆ.
ಗೇಲ್ 2015ರಲ್ಲಿ 36 ಟಿ20 ಪಂದ್ಯಗಳನ್ನು ಆಡಿದ್ದು, 135 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಪೂರನ್ ಈ ವರ್ಷ ಇದುವರೆಗೆ 58 ಪಂದ್ಯಗಳಲ್ಲಿ 139 ಸಿಕ್ಸರ್ ಬಾರಿಸಿದ್ದಾರೆ.