Nicholas Pooran: ಐಪಿಎಲ್ 18ನೇ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್ ದೈತ್ಯ ಪ್ರತಿಭೆ ನಿಕೋಲಸ್ ಪೂರನ್, ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ.
ಇಂದು (ಜೂ.10) ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಜಗತ್ತಿಗೆ ದೊಡ್ಡ ಶಾಕ್ ನೀಡಿದ್ದಾರೆ. ಕೇವಲ 29ನೇ ವಯಸ್ಸಿಗೆ ಈ ನಿರ್ಧಾರ ಏಕೆ ಮಾಡಿದರು ಪೂರನ್? ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮತ್ತು ಕ್ರಿಕೆಟ್ ವಲಯದಲ್ಲಿ ಕಾಡತೊಡಗಿದೆ. ನಿವೃತ್ತಿ ಕುರಿತಂತೆ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೂರನ್ ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ವೆಸ್ಟ್ ಇಂಡೀಸ್ ಪರ 61 ಟಿ20 ಮತ್ತು 106 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 4,000ಕ್ಕೂ ಅಧಿಕ ರನ್ ಗಳಿಸಿರುವ ಪೂರನ್, ಭಾರತೀಯ ಕ್ರಿಕೆಟ್ ಲೀಗ್ನಲ್ಲಿ ಲಖನೌ ಸೂಪರ್ ಜೈಂಟ್ಸ್ ಕಳೆದ ವರ್ಷಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಕೇವಲ ಐಪಿಎಲ್ನಲ್ಲಿ ಮಾತ್ರವಲ್ಲದೇ ವೆಸ್ಟ್ ಇಂಡೀಸ್ ಪರ ಅಬ್ಬರದ ಬ್ಯಾಟಿಂಗ್ ನಡೆಸಿ, ತಂಡಕ್ಕೆ ಹೆಚ್ಚುವರಿ ರನ್ಗಳ ಕೊಡುಗೆ ನೀಡಿದ್ದಾರೆ. ಇನ್ನು 8 ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೂ ಮುನ್ನವೇ ಅವರು ಕ್ರಿಕೆಟ್ ಜಗತ್ತಿಗೆ ಗುಡ್ಬೈ ಹೇಳಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ,(ಏಜೆನ್ಸೀಸ್).