ನವದೆಹಲಿ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಇಂದು ಅಫ್ಘಾನಿಸ್ತಾನ ತಂಡವನ್ನು 8 ವಿಕೆಟ್ಗಳಿಂದ ಮಣಿಸುವ ಮೂಲಕ ಭರ್ಜರಿ ಎರಡನೇ ಜಯಭೇರಿ ಬಾರಿಸಿದೆ. ಕಪ್ತಾನ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಭರ್ಜರಿ ಜೊತೆಯಾಟದ ಮೂಲಕ ಭಾರತ ಈ ಜಯವನ್ನು ಕಂಡಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 50 ಓವರ್ಗಳಲ್ಲಿ 8 ವಿಕೆಟ್ಗಳನ್ನು ಕಳೆದುಕೊಂಡು 272 ರನ್ ಗಳಿಸಿತ್ತು. ಆದರೆ ಭಾರತ ತಂಡ 35 ಓವರ್ಗಳಲ್ಲಿ 2 ವಿಕೆಟ್ಗಳ ನಷ್ಟದಲ್ಲಿ 273 ರನ್ ಗಳಿಸುವ ಮೂಲಕ ಜಯ ಗಳಿಸಿದೆ.
ಕಪ್ತಾನ ರೋಹಿತ್ ಶರ್ಮಾ ಅವರ ದಾಖಲೆಯ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯ ಅರ್ಧ ಶತಕ ಈ ಮ್ಯಾಚ್ನ ಹೈಲೈಟ್ ಆಗಿದ್ದು, ಇಬ್ಬರ ಜೊತೆಯಾಟಕ್ಕೆ ಕ್ರಿಕೆಟ್ ಪ್ರೇಮಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ 84 ಬಾಲ್ಗಳಲ್ಲಿ 134 ರನ್ ಬಾರಿಸುವ ಮೂಲಕ ಪ್ಲೇಯರ್ ಆಫ್ ದ ಮ್ಯಾಚ್ ಎನಿಸಿಕೊಂಡಿದ್ದಾರೆ. ಭಾರತ ತಂಡದ ಇಂದಿನ ಜಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿನಂದನೆಗಳನ್ನು ತಿಳಿಸಿದ್ದಾರೆ.