Asia Cup 2025: ಗುರುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ 2025ರ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಕ್ 11 ರನ್ಗಳ ಜಯ ಸಾಧಿಸಿತು. ಈ ಮೂಲಕ ಫೈನಲ್ಗೆ ಲಗ್ಗೆ ಇಟ್ಟಿದೆ.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 135 ರನ್ ಗುರಿ ನೀಡಿತು. ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಬಾಂಗ್ಲಾ ತಂಡ ತನ್ನ ಎಲ್ಲ ವಿಕೆಟ್ ಕಳೆದುಕೊಳ್ಳುವ ಮೂಲಕ 124 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಇನ್ನು ಇದೇ ಟೂರ್ನಿಯಲ್ಲಿ ಭಾರತ ಪಾಕಿಸ್ತಾನವನ್ನು 2 ಬಾರಿ ಮಣಿಸಿತ್ತು. ಇದೀಗ ಸೆ.28ಕ್ಕೆ ಭಾರತ-ಪಾಕ್ ಫೈನಲ್ನಲ್ಲಿ ಮತ್ತೆ ಮುಖಾಮುಖಿಯಾಗಲಿವೆ.