ಮುಲ್ತಾನ್: ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಹಾಗೂ ಹಾಲಿ ಆಟಗಾರರು ಟೀಮ್ ಇಂಡಿಯಾದ (Team India) ಕುರಿತು ಇಲ್ಲಸಲ್ಲದ ಹೇಳಿಕೆ ನೀಡಿ ತೀವ್ರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಇದರಲ್ಲಿ ಪ್ರಮುಖವಾಗಿ ವಿರಾಟ್ ಕೊಹ್ಲಿ (Virat Kohli) ಬಗ್ಗೆ ಮಾತನಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗುವ ಪಾಕಿಸ್ತಾನಿಗಳು (Pakistanis) ಇದೀಗ ಮತ್ತೊಮ್ಮೆ ರನ್ ಮೆಷಿನ್ ಕುರಿತು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದು, ಈ ಹೇಳಿಕೆ ಭಾರತೀಯರ (Indians) ಕೆಂಗಣ್ಣಿಗೆ ಗುರಿಯಾಗಿದೆ.
ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡಯುತ್ತಿರುವ ಇಂಗ್ಲೆಂಡ್ (England) ಹಾಗೂ ಪಾಕಿಸ್ತಾನ (Pakistan) ನಡುವಿನ ಟೆಸ್ಟ್ ಸರಣಿಯ (Test Series) ಮೊದಲ ಪಂದ್ಯದಲ್ಲಿ ಅಬ್ದುಲ್ಲಾ ಶಫಿಕ್ (Abdullah Shafique) ಶತಕ ಬಾರಿಸುವ ಮೂಲಕ ಫಾರ್ಮ್ಗೆ ಮರಳಿದ್ದು, ಕೊಹ್ಲಿ ಅವರಿಗಿಂತ ಶಫಿಕ್ ಉತ್ತಮ ದಾಖಲೆ ಹೊಂದಿದ್ದಾರೆ ಎಂದು ಪಾಕ್ ಕ್ರಿಕೆಟ್ ತಂಡದ ನಾಯಕ ಶಾನ್ ಮಸೂದ್ ಹೇಳಿಕೆ ನೀಡಿದ್ದು, ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಮೊದಲ ದಿನದಾಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೆಸ್ಟ್ ತಂಡದ ನಾಯಕ ಶಾನ್ ಮಸೂದ್(Shan Masood) ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಇದನ್ನೂ ಓದಿ: Weather Forecast| ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಐದು ದಿನ ಮಳೆ; Orange, Yellow Alert ಘೋಷಣೆ
ಕಳೆದ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಬ್ದುಲ್ಲಾ ಶಫಿಕ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಫಾರ್ಮ್ಗೆ ಮರಳಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಶಾನ್ ಮಸೂದ್, ನನ್ನ ಪ್ರಕಾರ ನೀವು ಕೇಳಿರುವ ಪ್ರಶ್ನೆ ನಿಖರವಾಗಿಲ್ಲ ಎಂದು ಭಾವಿಸುತ್ತೇನೆ. ಈ ವರ್ಷ ನಾವು ಚೆನ್ನಾಗಿ ಆಡಿಲ್ಲ ಎಂಬ ವಿಚಾರವನ್ನು ಒಪ್ಪಿಕೊಳ್ಳುತ್ತೇನೆ.
ವಿಷಯಗಳನ್ನು ವಸ್ತುನಿಷ್ಠವಾಗಿ ನೋಡಬೇಕಿದ್ದು, ಜನರು ಹೆಚ್ಚಾಗಿ ಅಂಕಿ ಅಂಶಗಳ ಬಗ್ಗೆ ಮಾತನಾಡುತ್ತಾರೆ. ನಾನು ಈ ಹಿಂದೆ ಪತ್ರಿಕೆಯಲ್ಲಿ ಒಂದನ್ನು ನೋಡುವಾಗ 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅಬ್ದುಲ್ಲಾ ವಿರಾಟ್ ಕೊಹ್ಲಿಗಿಂತ (Virat Kohli) ಉತ್ತಮ ದಾಖಲೆಯನ್ನು ಹೊಂದಿದ್ದಾರೆ ಎಂದು ಟೆಸ್ಟ್ ತಂಡದ ನಾಯಕ ಶಾನ್ ಮಸೂದ್ ಹೇಳಿದ್ದಾರೆ. ಈ ಹೇಳಿಕೆ ಭಾರತೀಯ ಕ್ರೀಡಾಭಿಮಾನಿಗಳನ್ನು ಕೆರಳಿಸಿದ್ದು, ಪಾಕ್ ಟೆಸ್ಟ್ ತಂಡದ ನಾಯಕನ ವಿರುದ್ಧ ಕಿಡಿಕಾರಿದ್ದಾರೆ.