ಕ್ರೀಡೆ

PBKS vs SRH: ಸನ್‌ ರೈಸರ್ಸ್ ಎದುರು ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಚಂಡೀಗಢ: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ಮತ್ತುಸ್ಪೋಟಕ ಬ್ಯಾಟಿಂಗ್ ಮೂಲಕವೇ ಗಮನ ಸೆಳೆಯುತ್ತಿರುವ ಸನ್‌ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.

ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಉಭಯ ತಂಡಗಳು.

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ, ಸನ್​ರೈಸರ್ಸ್ ಹೈದರಾಬಾದ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಎಸ್​ಆರ್​ಹೆಚ್ ತಂಡವು 5ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ 6ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆದ್ದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇರಬಹುದು.

ಸನ್‌ ರೈಸರ್ಸ್‌ನ ಸ್ಫೋಟಕ ಬ್ಯಾಟರ್‌ಗಳು ಅತ್ಯುತ್ತಮ ಲಯದಲ್ಲಿದ್ದಾರೆ. ಅಭಿಷೇಕ್ ಶರ್ಮಾ, ಕ್ಲಾಸೆನ್, ಟ್ರ್ಯಾವಿಸ್ ಹೆಡ್, ಮಾರ್ಕ್‌ರಮ್ ಮತ್ತೊಮ್ಮೆ ಅಬ್ಬರಿ ಪ್ರಭ್ ಸಿದರೆ ಪಂಜಾಬ್ ಬೌಲರ್‌ಗಳಿಗೆ ಉಳಿಗಾಲವಿಲ್ಲ. ಆದರೆ ತಂಡದ ಬೌಲಿಂಗ್ ವಿಭಾಗ ಅಷ್ಟೇನೂ ಬಲಿಷ್ಠ ವಾಗಿಲ್ಲ. ಭುವನೇಶ್ವರ್, ಉನಾಟ್, ಮಾರ್ಕಂಡೆ ದುಬಾರಿಯಾಗುತ್ತಿದ್ದಾರೆ. ಇದು ನಾಯಕ ಪ್ಯಾಟ್ ಕಮಿನ್ಸ್ ಮೇಲೆ ಒತ್ತಡ ಸೃಷ್ಟಿಸುತ್ತಿದೆ.

ಇನ್ನು ಎಸ್​ಆರ್​ಎಚ್​ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಇದುವರೆಗೆ 21 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಎಸ್​ಆರ್​ಹೆಚ್ 14, ಪಂಜಾಬ್ ಕಿಂಗ್ಸ್ 7 ಪಂದ್ಯಗಳಲ್ಲಿ ಜಯ ಸಾಧಿಸಿದೆ.