ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ, ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ (Virat Kohli) ದಾಖಲೆಗಳ ಸರದಾರ ಎಂದರೆ ತಪ್ಪಾಗಲಾರದು. ರಾಷ್ಟ್ರೀಯ ತಂಡದ ಪರ ಹಾಗೂ ಐಪಿಎಲ್ನಲ್ಲಿ ಈಗಾಗಲೇ ಹಲವು ಐತಿಹಾಸಿಕ ದಾಖಲೆ ಬರೆದಿರುವ ವಿರಾಟ್ ಕೊಹ್ಲಿ (Virat Kohli) ಕ್ರೀಡಾ ವಲಯದಲ್ಲಿ ಕಿಂಗ್ ಎಂದೇ ಕರೆಲ್ಪಡುತ್ತಾರೆ. ಇದೀಗ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಐತಿಹಾಸಿಕ ದಾಖಲೆಯೊಂದನ್ನು ನಿರ್ಮಿಸಿದ್ದು, ಕ್ರೀಡಾ ವಲಯದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
18ನೇ ಆವೃತ್ತಿಯ ಐಪಿಎಲ್ಗೆ (IPL) ಸಂಬಂಧಿಸಿದಂತೆ ಈಗಾಗಲೇ ರಿಟೇನ್ ಪಟ್ಟಿ ಹೊರಬಿದ್ದಿದ್ದು, ಆರ್ಸಿಬಿ (RCB) ತಂಡ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಹಾಗೂ ಯಶ್ ದಯಾಳ್ರನ್ನು ತಂಡದಲ್ಲಿ ಉಳಿಸಿಕೊಂಡಿದೆ. ವಿರಾಟ್ ಕೊಹ್ಲಿಯನ್ನು (Virat Kohli) ಬರೋಬ್ಬರಿ 21 ಕೋಟಿ ರೂಪಾಯಿಗೆ ರಿಟೇನ್ ಮಾಡುವ ಮೂಲಕ ಫ್ರಾಂಚೈಸಿ ಎಲ್ಲರ ಗಮನ ಸೆಳೆದಿದ್ದು, ಈ ಮೂಲಕ ಐಪಿಎಲ್ನಲ್ಲಿ (IPL) ಎಲ್ಲರ ಗಮನ ಸೆಳೆದಿದೆ.
ಐಪಿಎಲ್ (IPL) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ವಿರಾಟ್ ಕೊಹ್ಲಿ ಅವರನ್ನು 21 ಕೋಟಿ ರೂಪಾಯಿಗೆ ರಿಟೇನ್ ಮಾಡಿಕೊಂಡಿದೆ. ಇದರೊಂದಿಗೆ ಐಪಿಎಲ್ (IPL) ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ (Virat Kohli) ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ (Virat Kohli) ಅವರ ಹೆಸರಿನಲ್ಲಿತ್ತು.
ಅಂದರೆ 2021ರಲ್ಲಿ ಫ್ರಾಂಚೈಸಿ ವಿರಾಟ್ ಕೊಹ್ಲಿಯನ್ನು (Virat Kohli) 17 ಕೋಟಿ ರೂಪಾಯಿ ನೀಡಿ ರಿಟೇನ್ ಮಾಡಿಕೊಂಡಿತ್ತು. ಈ ಬಾರಿ 21 ಕೋಟಿ ರೂಪಾಯಿ ಪಡೆಯುವ ಮೂಲಕ ಐಪಿಎಲ್ನಲ್ಲಿ (IPL) ಇಪ್ಪತ್ತು ಕೋಟಿಗೂ ಅಧಿಕ ಮೊತ್ತ ಪಡೆದ ಏಕೈಕ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ (Virat Kohli) ಪಾತ್ರರಾಗಿದ್ದಾರೆ. ಇದಲ್ಲದೆ ಈ 21 ಕೋಟಿ ರೂಪಾಯಿ ಮೂಲಕ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿಯ ಒಟ್ಟು ಗಳಿಕೆ 200 ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಐಪಿಎಲ್ (IPL) ಇತಿಹಾಸದಲ್ಲಿ ಅತ್ಯಧಿಕ ಸಂಭಾವನೆ ಪಡೆದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿರಾಟ್ಗೂ ಮೊದಲು ರೋಹಿತ್ ಶರ್ಮ ಈ ಸಾಧನೆ ಮಾಡಿದ್ದು, ಐಪಿಎಲ್ನಲ್ಲಿ ಅವರ ಒಟ್ಟಾರೆ ಗಳಿಕೆ 210 ಕೋಟಿ ಸಂಭಾವನೆ ಪಡೆದಿದ್ದಾರೆ. ಇದೀಗ ವಿರಾಟ್ ಕೊಹ್ಲಿ 209.2 ಕೋಟಿ ರೂ.ನೊಂದಿಗೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಐಪಿಎಲ್ ಶುರುವಾದಾಗಿನಿಂದಲೂ ಆರ್ಸಿಬಿ ಪರ ಆಡುತ್ತಿರುವ ವಿರಾಟ್ ಅಧಿಕ ಮೊತ್ತ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ರೋಹಿತ್ ಶರ್ಮಾ 18 ಸೀಸನ್ಗಳಿಂದ ಒಟ್ಟು 210.9 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.