ಚೆನ್ನೈ: ಭಾರತೀಯ ಕ್ರೀಡಾ ಉದ್ಯಮದ ಗಾತ್ರವು ಮುಂಬರುವ ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ತಲುಪಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ಚಾಲನೆ ನೀಡಿ ಮಾತನಾಡಿದ ಮೋದಿ, 2029ರ ಯೂತ್ ಒಲಿಂಪಿಕ್ಸ್ ಮತ್ತು 2036ರ ಒಲಿಂಪಿಕ್ಸ್ ಆತಿಥ್ಯ ಒಲಿಸಿಕೊಳ್ಳಲು ಸರ್ಕಾರ ಸರ್ವಪ್ರಯತ್ನಗಳನ್ನು ಮಾಡಲಿದೆ ಎಂದರು.
ಜನವರಿ 31ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 26 ಕ್ರೀಡಾ ಸ್ಪರ್ಧೆಗಳಲ್ಲಿ 5,500ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.