ನವದೆಹಲಿ: ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ನಲ್ಲಿ ಉಸ್ಮಾನ್ ಖವಾಜ ಅವರ ವಿಕೆಟ್ ತೆಗೆಯುವ ಮೂಲಕ ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡದ ಸಾಧನೆ ಮಾಡಿದ್ದಾರೆ.
ಕಪಿಲ್ ದೇವ್, ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ಮತ್ತು ಆರ್.ಅಶ್ವಿನ್ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ಸಾಧನೆ ಮಾಡಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.
ನಾಗ್ಪರದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ 263 ರನ್ಗಳಿಗೆ ಆಲ್ಔಟ್ ಆಗಿದೆ. ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 4 ವಿಕೆಟ್, ಸ್ಪಿನ್ನರ್ಗಳಾದ ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದುಕೊಂಡಿದ್ದಾರೆ.
ಜಡೇಜಾ ಜತೆಗೆ ಆರ್.ಅಶ್ವಿನ್ ಕೂಡ ಹೊಸದೊಂದು ದಾಖಲೆ ಬರೆದಿದ್ದು, ಆಸ್ಟ್ರೇಲಿಯ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 100 ವಿಕೆಟ್ ಕೂಡ ಕಬಳಿಸಿದರು. (ಏಜೆನ್ಸೀಸ್)