ಕ್ರೀಡೆ

ಬೆಂಗಳೂರಿನಲ್ಲಿ ಮಳೆಯಿಂದಾಗಿ ಐಪಿಎಲ್​ ಟಾಸ್ ವಿಳಂಬ| IPL 2025

IPL | ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ತುಂತುರ ಮಳೆಯಿಂದ ಟಾಸ್ ವಿಳಂಬಗೊಂಡಿದ್ದು, ತವರಿನ ಎರಡು ಪಂದ್ಯದಲ್ಲಿ ಮುಗ್ಗರಿಸಿದ ಆರ್‌ಸಿಬಿಗೆ ಇದು ಮಹತ್ವದ ಪಂದ್ಯವಾಗಿದೆ.

ತವರಿನಾಚೆ ಆಡಿದ 4 ಪಂದ್ಯಗಳಲ್ಲೂ ಗೆದ್ದಿದ್ದರೂ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಮೊದಲ ಎರಡೂ ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ತನ್ನ ಮನೆಯಂಗಳದಲ್ಲೂ ಗೆಲುವು ಸಾಧಿಸುವ ಹಂಬಲದಲ್ಲಿದೆ. ಐಪಿಎಲ್ 18ನೇ ಆವೃತ್ತಿಯಲ್ಲಿ ಇಂದು (18) ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿಗೆ ಪಂಜಾಬ್ ಕಿಂಗ್ಸ್ ತಂಡದ ಸವಾಲು ಎದುರಾಗಲಿದೆ.

ಆರ್‌ಸಿಬಿ ತಂಡ ತವರಿನಲ್ಲಿ ಆಡಿದ ಮೊದಲೆರಡೂ ಪಂದ್ಯಗಳಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದಿತ್ತು ಮತ್ತು ಬ್ಯಾಟಿಂಗ್ ವಿಭಾಗದ ಕುಸಿತದಿಂದಾಗಿ ಸ್ಪರ್ಧಾತ್ಮಕ ಮೊತ್ತಕ್ಕೆ ತೃಪ್ತಿಪಟ್ಟಿತ್ತು. ಈ ಬಾರಿ ಆರ್‌ಸಿಬಿ ತವರಿನಲ್ಲೂ ತನ್ನ ಬ್ಯಾಟಿಂಗ್ ನಿರ್ವಹಣೆ ಸುಧಾರಿಸಿಕೊಳ್ಳಬೇಕಾದ ಅಗತ್ಯವಿದೆ. ಟಾಸ್ ಗೆದ್ದ ತಂಡಕ್ಕೆ ಅನುಕೂಲ ಮಾಡಿಕೊಡುವ ಚಿನ್ನಸ್ವಾಮಿ ಪಿಚ್‌ನಲ್ಲಿ ಆರ್‌ಸಿಬಿ ಸರ್ವಾಂಗೀಣ ನಿರ್ವಹಣೆ ತೋರುವುದು ಅಗತ್ಯವೆನಿಸಿದೆ.