Sonu Nigam: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಅದರಲ್ಲೂ 17 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದಿದೆ. ಈ ಸಂಭ್ರಮ ಬಹಳ ದಿನಗಳ ಕಾಲ ಇರಲಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಇದಾದ ಬಳಿಕ ಆರ್‌ಸಿಬಿ ಹಾಗೂ ಅಭಿಮಾನಿಗಳು ತುಂಬಾ ನೋವಿನಲ್ಲಿದ್ದಾರೆ. ಇದರ ಬೆನ್ನಲ್ಲೇ ಸೋನು ನಿಗಮ್ ಸಿಂಗ್ ಇದೀಗ ಮತ್ತೊಮ್ಮೆ ಆರ್‌ಸಿಬಿಯ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ;ಇರಾನ್ ಯಾವುದೇ ಕಾರಣಕ್ಕೂ ಶರಣಾಗಲ್ಲ: ಟ್ರಂಪ್ಗೆ ಖಮೇನಿ ವಾರ್ನಿಂಗ್| khamenei
ಇತ್ತೀಚೆಗೆ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಸೋನು ನಿಗಮ್ ಸಿಂಗ್ 'ಆರ್‌ಸಿಬಿ ಐಪಿಎಲ್ ಗೆದ್ದಾಗಿನಿಂದ, ಜಗತ್ತಿನಲ್ಲಿ ಏನೂ ಒಳ್ಳೆಯದಾಗುತ್ತಿಲ್ಲ ಎಂದು ಬರೆದಿದ್ದಾರೆ. ಈ ಟ್ವೀಟ್ ಬಳಿಕ, ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚಿನ ಘಟನೆಗಳನ್ನು ನಾವು ನೋಡುತ್ತಿದ್ದೇವೆ. ಜೂನ್ 12 ರಂದು, ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ವಿಮಾನವು ಟೇಕ್ ಆಫ್ ಆದ 2 ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.
ಈ ಭೀಕರ ಅಪಘಾತದಲ್ಲಿ 242 ಜನರು ಸಾವನ್ನಪ್ಪಿದರು. ಇದರ ನಂತರ, ಜೂನ್ 15 ರಂದು, ಕೇದಾರಘಾಟಿ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿತು, ಇದರಲ್ಲಿ ಪೈಲಟ್ ಸೇರಿದಂತೆ 7 ಜನರು ಸಾವನ್ನಪ್ಪಿದರು. ಹಾಗಾಗಿ ಈ ಎಲ್ಲಾ ಘಟನೆಗಳಿಂದಾಗಿ, ಸೋನು ನಿಗಮ್ ಸಿಂಗ್ ಆರ್‌ಸಿಬಿಯ ಗೆಲುವಿಗೆ ಇದು ಪ್ರಮುಖ ಕಾರಣ ಎಂದು ಆರೋಪಿಸಿದ್ದರು.
ಇದನ್ನೂ ಓದಿ: ವಿಮಾನ ಅಪಘಾತ; ಘಟನೆಯಲ್ಲಿ ಬದುಕುಳಿದ ವಿಶ್ವಾಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್;ಸಹೋದರನಿಗೆ ಭಾವುಕ ವಿದಾಯ | plane-crash
ಇನ್ನೂ ಇದರ ವಿರೋಧ ಹೆಚ್ಚಾಗುತ್ತಿದ್ದಂತೆಯೇ ಸೋನು ನಿಗಮ್ ಸಿಂಗ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ. ನನ್ನ ಖಾತೆಯನ್ನು ಅಣಕಿಸುವವರ ಬಗ್ಗೆ ನನಗೆ ಆಳವಾದ ನಂಬಿಕೆ ಇದೆ. ವಿಶೇಷವಾಗಿ ಆರ್‌ಸಿಬಿ ಅಭಿಮಾನಿಗಳಿಗೆ. ಬೇಗ ಗುಣಮುಖರಾಗಿ ಎಂದು ಪೋಸ್ಟ್ ಮಾಡಿದ್ದಾರೆ.
ಬಾಲಿವುಡ್ ಗಾಯಕ ಸೋನು ನಿಗಮ್ ಹೆಸರು ತಳುಕು ಹಾಕಿಕೊಂಡಿದೆ. ಏಕೆಂದರೆ ಪ್ರಸ್ತುತ ತೇಜಸ್ವಿ ಸೂರ್ಯ ಕುರಿತು ಟ್ವೀಟ್ ಮಾಡಿರುವ ಸೋನು ನಿಗಮ್ ಬಾಲಿವುಡ್ ಗಾಯಕ ಸೋನು ನಿಗಮ್ ಅಲ್ಲ… ಈತನ ಹೆಸರು ಸೋನು ನಿಗಮ್ ಸಿಂಗ್ (@SonuNigamSingh). ಈ ಸೋನು ನಿಗಮ್ ಸಿಂಗ್ ಎಕ್ಸ್ ಖಾತೆಯಲ್ಲಿನ ಮಾಹಿತಿಯಂತೆ ಈತ ಬಿಹಾರ ನಿವಾಸಿಯಾಗಿದ್ದು, ವೃತ್ತಿಯಲ್ಲಿ ವಕೀಲ ಎಂದು ಹೇಳಿಕೊಂಡಿದ್ದಾನೆ.
ಈ ಟ್ವೀಟ್ ಮಾಡಿದ್ದು ಗಾಯಕ ಸೋನು ನಿಗಮ್ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೆ ಗಾಯಕ ಸೋನು ನಿಗಮ್ ಅವರು ಟ್ವಿಟರ್ ಬಳಕೆ ಮಾಡೋದು ನಿಲ್ಲಿಸಿ ಏಳು ವರ್ಷಗಳು ಕಳೆದಿವೆ.
(ಏಜೆನ್ಸೀಸ್)