ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿಯಾಗಿರುವ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಮಾರ್ಚ್ 24 ರಂದು ವಿಜಯಾನಂದ ಟ್ರಾವೆಲ್ಸ್ ವತಿಯಿಂದ ಹಮ್ಮಿಕೊಂಡಿರುವ ವಿಆರ್ಎಲ್ ಬಸ್ ವರ್ಕ್ ಶಾಪ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
2024 ಮಾರ್ಚ್ 24 ರಂದು ಸಂಜೆ 4:00 ಗಂಟೆಗೆ ಮೈಸೂರು ರಸ್ತೆಯಲ್ಲಿರುವ ಆರ್ವಿ ಕಾಲೇಜ್ ಬಳಿ ವಿಆರ್ಎಲ್ ಬಸ್ ವರ್ಕ್ ಶಾಪ್ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ರಾಯಲ್ ಚಾಲೆಂಜರ್ಸ್ ಆಟಗಾರ್ತಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮದ ವೇಳೆ ಶ್ರೇಯಾಂಕಾ ಪಾಟೀಲ್ ಅವರು ಅಭಿಮಾನಿಗಳ ಜತೆ ಸಮಾಲೋಚನೆ ನಡೆಸುವುದರ ಜತೆ ಬ್ಯಾಟ್ ಹಿಡಿದು ಕ್ರಿಕೆಟ್ ಆಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕುಟುಂಬದ ಜತೆ ಬಂದು ವೀಕ್ಷಿಸಲು ಅವಕಾಶ ಇರುತ್ತದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ (ಡಬ್ಲುಪಿಎಲ್) ಆರ್ಸಿಬಿ ತಂಡದ ಪರವಾಗಿ ನೀಡಿದ ಪ್ರದರ್ಶನದಿಂದ 2023ರಲ್ಲಿ ಭಾರತ ಮಹಿಳಾ ತಂಡದ ಪರ ಟಿ20 ಹಾಗೂ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ ಬೆಂಗಳೂರಿನ ಹುಡುಗಿ ಶ್ರೇಯಾಂಕಾ ಪಾಟೀಲ್ ಭವಿಷ್ಯದ ತಾರೆ ಎನಿಸಿದ್ದಾರೆ.