ಇನ್ನೂ ಅತೀ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಕ್ರೀಡಾಂಗಣದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ ಏಳು ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಅದರಲ್ಲಿ 6 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ipl-2025| ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಪಾರ ಅಭಿಮಾನಿ ಬಳಗವೇ ಹರಿದು ಬಂದಿದೆ.
ಇದನ್ನೂ ಓದಿ: ಅಹಮದಾಬಾದ್ನಿಂದ ಪಾಟ್ನಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ;ಪ್ರಯಾಣಿಕರ ಸ್ಥಳಾಂತರ| indigo-flight
(ಏಜೆನ್ಸೀಸ್)
ಡಿಯಂ ಭರ್ತಿಯಾದ ಹಿನ್ನೆಲೆ ಗೇಟ್ ಬಂದ ಮಾಡಲಾಗಿತ್ತು. ಈ ವೇಳೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಒಳಗೆ ನುಗ್ಗಲು ಯತ್ನಿಸಿದಾಗ ಗೇಟ್ ಒಂದು ಕುಸಿದು ಬಿದ್ದಿದೆ. ಗಾಯಾಳುಗಳನ್ನು ಕೂಡಲೇ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಒಳ ಹೋಗುವ ವೇಳೆ ಈ ಘಟನೆ ನಡೆದಿದ್ದು ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೆ ಓರ್ವ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇನ್ನು ವಿಧಾನಸೌಧದ ಬಳಿ ಆಟಗಾರರಿಗೆ ಅಭಿನಂದನಾ ಸಮಾರಂಭ ನಡೆಯುತ್ತಿದ್ದು ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.