ದುಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ತಯಾರಿ ಆರಂಭಿಸಿದೆ. ಸುದ್ದಿ ಮೂಲಗಳ ಪ್ರಕಾರ ಮಾರ್ಚ್ 22ರಂದು ಟೂರ್ನಿ ಆರಂಭವಾಗಲಿದ್ದು, ಮಿನಿ ಹರಾಜು ಕಾರ್ಯಕ್ರಮದ ಬಳಿಕ ಬಿಸಿಸಿಐ ವೇಳಾಪಟ್ಟಿ ಸಿದ್ದತೆಯಲ್ಲಿ ತೊಡಗಿಸಿಕೊಂಡಿದೆ.
ಮಂಗಳವಾರ (ಡಿಸೆಂಬರ್ 19) ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ರಿಷಬ್ ಪಂತ್ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರೊಂದಿಗೆ ಟೆನಿಸ್ ಆಡುತ್ತಿರುವ ಪೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳವಾರ (ಡಿಸೆಂಬರ್ 19) ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ ಪಂತ್ ಬಳಿಕ ಮಹೇಂದ್ರ ಸಿಂಗ್ ಧೋನಿ ಅವರೊಂದಿಗೆ ಟೆನಿಸ್ ಆಡಿದ್ದಾರೆ. ಇವರ ಜೊತೆಗೆ ಆಶಿಶ್ ನೆಹ್ರಾ ಕೂಡ ಇದ್ದರು ಎಂದು ಹೇಳಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಪಘಾತಕ್ಕೊಳಕ್ಕಾಗಿ ಚೇತರಿಕೆ ಕಾಣುತ್ತಿರುವ ರಿಷಭ್ ಪಂತ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದು ಮುಂದಿನ ವರ್ಷ ಕ್ರಿಕೆಟ್ಗೆ ಮರಳುವ ವಿಶ್ವಾಸದಲ್ಲಿದ್ದಾರೆ.
ರಿಷಭ್ ಪಂತ್ ಪಂತ್ ಅವರು 2024ರ ಐಪಿಎಲ್ ಆವೃತ್ತಿಯಲ್ಲಿ ಕಣಕ್ಕಿಳಿಯುವುದು ಖಚಿತ ಎಂದು ಈಗಾಗಕೇ ಡೆಲ್ಲಿ ಕ್ಯಾಪಿಟಲ್ಸ್ ದೃಢಪಡಿಸಿದೆ. ಸುಮಾರು ಒಂದು ವರ್ಷದಿಂದ ಕ್ರಿಕೆಟ್ ಕ್ಷೇತ್ರದಿಂದ ಹೊರಗುಳಿದಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ 2024ರ ಐಪಿಎಲ್-17ರಲ್ಲಿ ಆಡುವ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮ್ಯಾನೇಜ್‌ಮೆಂಟ್ ಖಚಿತಪಡಿಸಿದೆ.