ಕ್ರೀಡೆ

ವಂಚನೆ ಆರೋಪದಡಿ ಅರೆಸ್ಟ್ ವಾರೆಂಟ್​ ಜಾರಿ; Robin Uthappa ನೀಡಿದ ಸ್ಪಷ್ಟನೆ ಹೀಗಿದೆ

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ರಾಬಿನ್​ ಉತ್ತಪ್ಪ (Robin Uthappa) ವಿರುದ್ಧ ಕೇಳಿ ಬಂದಿರುವ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಅರೆಸ್ಟ್​ ವಾರೆಂಟ್​ ಜಾರಿ ಮಾಡಿದ್ದು, ಈ ಸಂಬಂಧ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಾಗಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ರಾಬಿನ್ (Robin Uthappa)​, ನನ್ನ ವಿರುದ್ಧ ಕೇಳಿ ಬಂದಿರುವ ಪಿಎಫ್​ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಾನು ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈ.ಲಿ, ಸೆಂಟಾರಸ್ ಲೈಫ್‌ಸ್ಟೈಲ್ ಬ್ರಾಂಡ್ಸ್ ಪ್ರೈ. ಲಿಮಿಟೆಡ್, ಮತ್ತು ಬೆರಿಜ್ ಫ್ಯಾಶನ್ ಹೌಸ್ ಲಿಮಿಟೆಡ್​ ಜೊತೆಗಿನ ನನ್ನ ಒಳಗೊಳ್ಳುವಿಕೆ ಸಂಬಂಧ ಕೆಲವು ಸಂಬಂಧಿಸಿದಂತೆ ಕೆಲವು ಸ್ಪಷ್ಟೀಕರಣವನ್ನು ನೀಡಲು ಬಯಸುತ್ತೇನೆ.

2018-19 ರರ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣ ನೀಡಿದ ಕಾರಣ ಇದೇ ಕಾರಣಕ್ಕೆ ಆ ಕಂಪನಿಗಳು ನನ್ನನ್ನು ನಿರ್ದೇಶಕನಾಗಿ ನೇಮಕಗೊಳಿಸಿದ್ದವು. ಆದಾಗ್ಯೂ ಸಹ ನಾನು ಆ ಕಂಪನಿಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರವನ್ನು ಹೊಂದಿರಲಿಲ್ಲ. ಅಥವಾ ವ್ಯವಹಾರಗಳ ದೈನಂದಿನ ಕಾರ್ಯಾಚರಣೆಗಳಲ್ಲಿ ನಾನು ಭಾಗಿಯಾಗಿರಲಿಲ್ಲ.

ವೃತ್ತಿಪರ ಕ್ರಿಕೆಟಿಗ, ನಿರೂಪಕನಾಗಿ ಆ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಭಾಗಿಯಾಗಿಲ್ಲ. ವಾಸ್ತವವಾಗಿ, ನಾನು ಇಲ್ಲಿಯವರೆಗೆ ಹಣ ಹೂಡಿಕೆ ಮಾಡಿರುವ ಇತರೆ ಕಂಪನಿಗಳಲ್ಲಿಯೂ ಕಾರ್ಯನಿರ್ವಾಹಕ ಪಾತ್ರವನ್ನು ವಹಿಸಿರುವುದಿಲ್ಲ. ಈಗ ಆರೋಪ ಎದುರಿಸುತ್ತಿರುವ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ ಹಣವನ್ನು ಮರುಪಾವತಿಸಲು ವಿಫಲವಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ನಾನು ಹಲವು ವರ್ಷಗಳ ಹಿಂದೆಯೇ ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆ ಕಂಪನಿಗಳ ವಿರುದ್ಧ ಪ್ರಸ್ತುತ ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆರೋಪ ಎದುರಿಸುತ್ತಿರುವ ಕಂಪನಿಗಳಲ್ಲಿ ಉದ್ಯೋಗಿಗಳಿಗೆ ಬಾಕಿಯಿರುವ ಪಿಎಫ್ ಹಣ ಪಾವತಿಸುವಂತೆ ಒತ್ತಾಯಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗಳಿಗೆ ನನ್ನ ಕಾನೂನು ಸಲಹಾ ತಂಡವು ಪ್ರತಿಕ್ರಿಯಿಸಿದೆ. ಆ ಕಂಪನಿಗಳಲ್ಲಿ ನನ್ನ ಪಾತ್ರವಿಲ್ಲ ಎಂದು ದೃಢೀಕರಿಸುವ ದಾಖಲೆಗಳನ್ನು ಸಹ ಒದಗಿಸಿದ್ದೇನೆ. ಅದರ ಹೊರತಾಗಿಯೂ ಪಿಎಫ್ ಅಧಿಕಾರಿಗಳು ತಮ್ಮ ಪ್ರಕ್ರಿಯೆಗಳನ್ನು ಮುಂದುವರೆಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯವನ್ನು ಬಗೆಹರಿಸಲು ನನ್ನ ಕಾನೂನು ಸಲಹೆಗಾರರು ಕ್ರಮ ಕೈಗೊಳ್ಳಲಿದ್ಧಾರೆ ಎಂದು ರಾಬಿನ್​ ಉತ್ತಪ್ಪ (Robin Uthappa) ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.