Retirement: ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಏಕದಿನ ಮಾದರಿಯಲ್ಲಿ ಮಾತ್ರ ಆಡುವುದಾಗಿ ಸ್ಪಷ್ಟಪಡಿಸಿರುವ ರೋಹಿತ್, 2024ರ ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಟಿ20ಐ ಮಾದರಿಯಿಂದ ನಿವೃತ್ತರಾಗಿದ್ದರು.
ರೋಹಿತ್ ಅವರನ್ನು ಟೆಸ್ಟ್ ನಾಯಕತ್ವದಿಂದ ವಜಾಗೊಳಿಸಲಾಗಿದೆ ಎಂಬ ವರದಿಗಳು ವೈರಲ್ ಆದ ಕೆಲವೇ ನಿಮಿಷಗಳ ನಂತರ, ಶರ್ಮ ತಕ್ಷಣದಿಂದ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.
38 ವರ್ಷದ ಅವರು ತಮ್ಮ ವೃತ್ತಿಜೀವನದ ದ್ವಿತೀಯಾರ್ಧದಲ್ಲಿ ಭಾರತದ ಪರ ಅತ್ಯಂತ ಫಲಪ್ರದ ಟೆಸ್ಟ್ ಬ್ಯಾಟ್ಸ್‌ಮನ್ ಆಗಿದ್ದರು, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳೊಂದಿಗೆ 4301 ರನ್ ಗಳಿಸಿದ್ದಾರೆ.