ಕ್ರೀಡೆ

VIDEO | ಧೋನಿ ದಾಖಲೆ ಮುರಿದ ರೋಹಿತ್ ಶರ್ಮಾ; ಯಾವುದು ಆ ದಾಖಲೆ?

ಹೈದರಾಬಾದ್: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಹೊಸದೊಂದು ದಾಖಲೆಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಹೆಗ್ಗಳಿಕೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ.

ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು. 238 ಏಕದಿನ ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 125 ಸಿಕ್ಸರ್‌ ಸಿಡಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ 123 ಸಿಕ್ಸರ್ ಬಾರಿಸಿದ್ದಾರೆ.

ಭಾರತ ತಂಡದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದವರಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದುಕೊಂಡರೆ, ಧೋನಿ ಎರಡನೇ ಸ್ಥಾನಕ್ಕಿಳಿದಿದ್ದಾರೆ. ಇನ್ನು ಕ್ರಮವಾಗಿ 71 ಸಿಕ್ಸರ್ ಸಿಡಿಸಿರುವ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದರೆ, ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈವರೆಗೆ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 9000ಕ್ಕೂ ಅಧಿಕ ರನ್ ಕೆಲ ಹಾಕಿದ್ದಾರೆ. 29 ಶತಕಗಳನ್ನು ಸಿಡಿಸಿರುವ ರೋಹಿತ್ ಶ್ರೀಲಂಕಾ ವಿರುದ್ಧ 264ರನ್ ಗಳಿಸಿರುವುದು ಬೆಸ್ಟ್​ ಸ್ಕೋರ್. (ಏಜೆನ್ಸೀಸ್)