ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ರೋಚಕಘಟ್ಟ ತಲುಪಿದ್ದು, ಭಾರತದ ಗೆಲುವಿಗೆ 340 ರನ್ಗಳ ಗುರಿಯನ್ನು ನೀಡಲಾಗಿದೆ. ಇನ್ನೂ ಗುರಿ ಬೆನ್ನತ್ತಿರುವ ಭಾರತ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ. ನಾಯಕ ರೋಹಿತ್ ಶರ್ಮ (Rohit Sharma) ಮತ್ತೊಮ್ಮೆ ವಫಲ್ಯ ಅನುಭವಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಸತತ ವೈಫಲ್ಯ ಅನುಭವಿಸಿರುವ ರೋಹಿತ್ ಶರ್ಮ (Rohit Sharma) ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ನಲ್ಲೂ ಕೂಡ ತೀವ್ರ ಮುಖಭಂಗವನ್ನು ಅನುಭವಿಸಿದ್ದಾರೆ. ಆರಂಭಿಕರಾಗಿ ಕಣಕ್ಕಿಳಿಯುವ ಸಲುವಾಗಿ ತಂಡದಲ್ಲಿ ಬದಲಾವಣೆ ಮಾಡಿದ್ದರು. ಆದರೆ, ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ವೈಫಲ್ಯ ಅನುಭವಿಸಿರುವ ರೋಹಿತ್ ಶರ್ಮ ನಾಯಕ ಪ್ಯಾಟ್ ಕಮಿನ್ಸ್ಗೆ ವಿಕೆಟ್ ಒಪ್ಪಿಸುವ ಮೂಲಕ ಅನಪೇಕ್ಷಿತ ದಾಖಲೆಗೆ ಕೊರಳೊಡ್ಡಿದ್ದಾರೆ.
ಪ್ಯಾಟ್ ಕಮಿನ್ಸ್ಗೆ ವಿಕೆಟ್ ಒಪ್ಪಿಸುವ ಮೂಲಕ ಅತಿ ಹೆಚ್ಚು ಬಾರಿ ಎದುರಾಳಿ ತಂಡದ ನಾಯಕನಿಂದ ಔಟಾದ ಆಟಗಾರ ಎಂಬ ಅಪಕೀರ್ತಿಗೆ ರೋಹಿತ್ ಶರ್ಮ ಪಾತ್ರರಾಗಿದ್ದಾರೆ. ರೋಹಿತ್ ಶರ್ಮ ಈವರೆಗೂ ಪ್ಯಾಟ್ಕಮಿನ್ಸ್ಗೆ ಆರು ಬಾರಿ ವಿಕೆಟ್ ಒಪ್ಪಿಸಿದ್ದು, ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಈ ಮೂಲಕ ರೋಹಿತ್ ಶರ್ಮ ಮತ್ತೊಮ್ಮೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಈ ವಿಚಾರವಾಗಿ ರೋಹಿತ್ಗೆ ಮಾಜಿ ಕ್ರಿಕೆಟಿಗರು, ಕ್ರೀಡಾಭಿಮಾನಿಗಳು ಸೇರಿದಂತೆ ಹಲವರು ನಿವೃತ್ತಿ ಪಡೆಯುವಂತೆ ಸೂಚಿಸುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ರೋಹಿತ್ (Rohit Sharma) ಪಾಲಿಗೆ ನಿರ್ಣಾಯಕ ಎಂದು ಹೇಳಲಾಗಿದೆ. ಮೊದಲ ಪಂದ್ಯದಲ್ಲಿ ತಂಡಕ್ಕೆ 295 ರನ್ಗಳ ಭರ್ಜರಿ ಜಯ ತಂದುಕೊಟ್ಟಿದ್ದ ವೇಗಿ ಬುಮ್ರಾಗೆ ನಾಯಕತ್ವವನ್ನು ನೀಡುವಂತೆ ಆಗ್ರಹ ಕೇಳಿ ಬರುತ್ತಿದ್ದು, ಸರಣಿ ಮುಗಿದ ಬಳಿಕ ಅಂತಿಮ ಚಿತ್ರ ಹೊರಬೀಳಲಿದೆ.