ಯುಎಸ್ಎ: ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 8ನೇ ಪಂದ್ಯದಲ್ಲಿ ಭಾರತ ಹಾಗೂ ಐರ್ಲೆಂಡ್ ಮುಖಾಮುಖಿಯಾಗಲಿದ್ದು, ಎದುರಾಳಿ ತಂಡವನ್ನು ತಂಡವನ್ನು ಸೋಲಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಾಣಲು ಟೀಮ್ ಇಂಡಿಯಾ ಸಜ್ಜಾಗಿದೆ.
ಇನ್ನೂ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ತೀವ್ರ ಕುತೂಹಲ ಮೂಡಿಸಿದೆ. ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿಫಲವಾದ ಕಾರಣ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಡಗೌಟ್‌ಗೆ ಸೀಮಿತವಾಗಬಹುದು. ಅಗ್ರ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಜೊತೆಗೆ ನಾಯಕ ರೋಹಿತ್ ಇನ್ನಿಂಗ್ಸ್ ಆರಂಭಿಸುವುದು ಖಚಿತವಾಗಿದೆ. ಅಭ್ಯಾಸ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ವಿಫಲವಾಗಿರುವುದರಿಂದ ರಿಷಬ್ ಪಂತ್ ವಿಕೆಟ್ ಕೀಪರ್ ಆಗಿ ಆಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಸೈಮನ್ ಡೌಲ್ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಡೌಲ್, ನನ್ನ ಪ್ರಕಾರ ರೋಹಿತ್ ಶರ್ಮಾರೊಂದಿಗೆ ಆರಂಭಿಕರಾಗಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವುದು ಸೂಕ್ತ. ಇವರಿಬ್ಬರು ಅತ್ಯುತ್ತಮ ಆಟಗಾರರಾಗಿದ್ದು, ತಂಡಕ್ಕೆ ಉತ್ತಮ ಅರಂಭ ಒದಗಿಸುತ್ತಾರೆ. ಆದೇ ರೀತಿ ನಂ3ರಲ್ಲಿ ರಿಷಭ್, ನಂ4ರಲ್ಲಿ ಸೂರ್ಯಕುಮಾರ್, 5,6 ಮತ್ತು 7ರಲ್ಲಿ ದುಬೆ, ಹಾರ್ದಿಕ್, ಜಡೇಜಾ ಬ್ಯಾಟಿಂಗ್ ಮಾಡಿದರೆ ತಂಡ ಉತ್ತಮ ಸ್ಕೋರ ಗಳಿಸುತ್ತದೆ.
ನಾನು ಕೇಳಿಪಟ್ಟಿರುವ ಪ್ರಕಾರ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ರನ್ನು ಆರಂಭಿಕರಾಗಿ ಕಣಕ್ಕಿಳಿಸಲಾಗುವುದು ಎಂದು ಹೇಳಲಾಗಿದೆ. ಒಂದು ವೇಳೆ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದರೆ ಶಿವಂ ದುಬೆರನ್ನು ತಂಡದಿಂದ ಕೈ ಬಿಡಬೇಕಾಗುತ್ತದೆ. ನನ್ನ ಪ್ರಕಾರ ಮಧ್ಯಮ ಕ್ರಮಾಂಕದಲ್ಲಿ ಇಬ್ಬರು ಎಡಗೈ ಬ್ಯಾಟ್ಸ್ಮನ್ಗಳಿಗೆ ಅವಕಾಶ ನೀಡುವುದು ಡೌಟ್ ಎನ್ನಿಸುತ್ತಿದೆ. ಹೀಗಾಗಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಅಥವಾ ಶಿವಂ ಪೈಕಿ ಯಾರು ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ ಎಂದು ಮಾಜಿ ಕ್ರಿಕೆಟಿಗ ಸೈಮನ್ ಡೌಲ್ ಹೇಳಿದ್ದಾರೆ.