ನವದೆಹಲಿ: ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸದ ಕೊನೆಗೆ ಆಗಸ್ಟ್ನಲ್ಲಿ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ನೂತನ ಅಧ್ಯಕ್ಷ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬುಧವಾರ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಿದೆ. ನಿರೀೆಯಂತೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕರಾಗಿ ಮುಂದುವರಿದರೆ, ಸೂರ್ಯಕುಮಾರ್ ಯಾದವ್ಗೆ ಉಪನಾಯಕ ಪಟ್ಟ ಒಲಿದಿದೆ. ಮುಂಬೈ ಇಂಡಿಯನ್ಸ್ ಪರ ಮಿಂಚಿರುವ ಎಡಗೈ ಬ್ಯಾಟರ್ ತಿಲಕ್ ವರ್ಮ ತಂಡಕ್ಕೆ ಸೇರ್ಪಡೆಯಾಗಿರುವ ಏಕೈಕ ಹೊಸಮುಖವಾಗಿದ್ದಾರೆ.
ಅನುಭವಿ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಮೊಹಮದ್ ಶಮಿ ಜತೆಗೆ ಸಿರಾಜ್ಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಆಯ್ಕೆ ಸಮಿತಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ಕಲ್ಪಿಸಿದೆ. ಆದರೆ, ಐಪಿಎಲ್ನಲ್ಲಿ ಮಿಂಚಿದ್ದ ಋತುರಾಜ್ ಗಾಯಕ್ವಾಡ್ ಹಾಗೂ ರಿಂಕು ಸಿಂಗ್ ಸ್ಥಾನ ಪಡೆಯುವಲ್ಲಿ ವಿಲರಾಗಿದ್ದು, ಉಮ್ರನ್ ಮಲಿಕ್, ಸಂಜು ಸ್ಯಾಮ್ಸನ್ ಮರಳಿ ಸ್ಥಾನ ಪಡೆದಿದ್ದಾರೆ. ಯಶಸ್ವಿ ಜೈಸ್ವಾಲ್, ಮುಕೇಶ್ ಕುಮಾರ್ ಹಾಗೂ ತಿಲಕ್ ವರ್ಮ ಮೊದಲ ಬಾರಿಗೆ ಟಿ20 ತಂಡದ ಕರೆ ಪಡೆದಿದ್ದಾರೆ. ಟಿ20 ಸರಣಿ ಆಗಸ್ಟ್ 3ರಿಂದ ನಡೆಯಲಿದೆ.
ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಕಳೆದ ವರ್ಷದ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಸೆಮಿಫೈನಲ್ನಲ್ಲಿ ಹೊರಬಿದ್ದ ಬಳಿಕ ಒಂದೂ ಟಿ20 ಪಂದ್ಯ ಆಡಿಲ್ಲ. ಭಾರತ ತಂಡ ಕಳೆದ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿದ್ದ ಕೊನೇ ಟಿ20 ಸರಣಿಯಲ್ಲಿ ಆಡಿದ್ದ 7 ಆಟಗಾರರು ಈ ಬಾರಿ ಕಡೆಗಣಿಸಲ್ಪಟ್ಟಿದ್ದಾರೆ.
ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮಾನ್ ಗಿಲ್, ತಿಲಕ್ ವರ್ಮ, ಸಂಜು ಸ್ಯಾಮ್ಸನ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಉಮ್ರನ್ ಮಲಿಕ್, ಆವೇಶ್ ಖಾನ್, ಮುಕೇಶ್ ಕುಮಾರ್.