ಕ್ರೀಡೆ

ಆಯ್ಕೆ ವಿವಾದದ ಬೆನ್ನಲ್ಲೇ ಭಾರತ ಮಹಿಳಾ ಕ್ರಿಕೆಟ್​ ತಂಡಕ್ಕೆ ಶಿಖಾ, ಶೆಫಾಲಿ ವಾಪಸ್

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಅನುಭವಿ ವೇಗಿ ಶಿಖಾ ಪಾಂಡೆ ತಂಡಕ್ಕೆ ಮರಳಿದ್ದಾರೆ. ಶೆಫಾಲಿ ವರ್ಮ ಟಿ20 ಜತೆಗೆ ಟೆಸ್ಟ್, ಏಕದಿನ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಜಾರ್ಖಂಡ್‌ನ ಯುವ ವಿಕೆಟ್ ಕೀಪರ್-ಬ್ಯಾಟುಗಾರ್ತಿ ಇಂದ್ರಾಣಿ ರಾಯ್ ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಕರೊನಾದಿಂದ ಚೇತರಿಕೆಯ ಹಾದಿಯಲ್ಲಿರುವ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಫಿಟ್ನೆಸ್ ಕೊರತೆಯ ಕಾರಣದಿಂದಾಗಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಸ್ನೇಹ್ ರಾಣಾ 2016ರ ಬಳಿಕ ತಂಡಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿಯಲ್ಲಿ ಮಾಡಿದಂತೆ ಪ್ರಯೋಗಗಳಿಗೆ ಮುಂದಾಗದ ನೀತು ಡೇವಿಡ್ ಸಾರಥ್ಯದ ಆಯ್ಕೆ ಸಮಿತಿ, ಏಕೈಕ ಟೆಸ್ಟ್, 3 ಏಕದಿನ, 3 ಟಿ20 ಪಂದ್ಯಗಳಿಗೆ ಬಲಿಷ್ಠ ತಂಡವನ್ನು ಆರಿಸಿದೆ. ಜೂನ್ 16ರಿಂದ ಜುಲೈ 15ರವರೆಗೆ ಪ್ರವಾಸ ನಡೆಯಲಿದೆ.

ಟೆಸ್ಟ್-ಏಕದಿನ ತಂಡ: ಮಿಥಾಲಿ ರಾಜ್ (ನಾಯಕಿ), ಸ್ಮತಿ ಮಂದನಾ, ಹರ್ಮಾನ್‌ಪ್ರೀತ್ ಕೌರ್ (ಉಪನಾಯಕಿ), ಪೂನಂ ರಾವತ್, ಪ್ರಿಯಾ ಪೂನಿಯಾ, ದೀಪ್ತಿ ಶರ್ಮ, ಜೆಮೀಮಾ ರೋಡ್ರಿಗಸ್, ಶೆಫಾಲಿ ವರ್ಮ, ಸ್ನೇಹ್ ರಾಣಾ, ತಾನಿಯಾ ಭಾಟಿಯಾ, ಇಂದ್ರಾಣಿ ರಾಯ್, ಜೂಲನ್ ಗೋಸ್ವಾಮಿ, ಶಿಖಾ ಪಾಂಡೆ, ಪೂಜಾ ವಸಾಕರ್, ಅರುಂಧತಿ ರೆಡ್ಡಿ, ಪೂನಂ ಯಾದವ್, ಏಕ್ತಾ ಬಿಷ್ಟ್, ರಾಧಾ ಯಾದವ್.

ಟಿ20 ತಂಡ: ಹರ್ಮಾನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂದನಾ, ದೀಪ್ತಿ ಶರ್ಮ, ಜೆಮೀಮಾ ರೋಡ್ರಿಗಸ್, ಶೆಫಾಲಿ ವರ್ಮ, ರಿಚಾ ಘೋಷ್, ಹರ್ಲೀನ್ ಡಿಯೋಲ್, ಸ್ನೇಹ್ ರಾಣಾ, ತಾನಿಯಾ ಭಾಟಿಯಾ, ಇಂದ್ರಾಣಿ ರಾಯ್, ಶಿಖಾ ಪಾಂಡೆ, ಪೂಜಾ ವಸಾಕರ್, ಅರುಂಧತಿ ರೆಡ್ಡಿ, ಪೂನಂ ಯಾದವ್, ಏಕ್ತಾ ಬಿಷ್ಟ್, ರಾಧಾ ಯಾದವ್, ಸಿಮ್ರಾನ್ ದಿಲ್ ಬಹದೂರ್.