ಕ್ರೀಡೆ

ಏಕದಿನ ವಿಶ್ವಕಪ್| ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದ ದಕ್ಷಿಣ ಆಫ್ರಿಕಾ; ಎರಡು ತಂಡಗಳಲ್ಲಿ ಪ್ರಮುಖ ಬದಲಾವಣೆ

ಕಲ್ಕತ್ತಾ: ಕ್ರಿಕೆಟ್​ ಕಾಶಿ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ ಎರಡನೇ ಸೆಮಿಫಿನಾಲೆಯಲ್ಲಿ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ತಂಡ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದೆ.

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಆಫ್ರಿಕಾ ಪರ ಮಾರ್ಕೋ ಜೇನ್​ಸನ್​ ಹಾಗೂ ತರ್ಬೇಜ್​ ಶಮ್ಸಿ ಕಣಕ್ಕಿಳಿಯುತ್ತಿದ್ದಾರೆ. ಆಸ್ಟ್ರೇಲಿಯಾ ಪರ ಗ್ಲೆನ್​ ಮ್ಯಾಕ್ಸ್​ವೆಲ್ ಹಾಗೂ ಮಿಚೆಲ್​ ಸ್ಟಾರ್ಕ್​ ತಂಡಕ್ಕೆ ವಾಪಸ್​ ಆಗಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು 109 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 55 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, 50 ಮ್ಯಾಚ್​ಗಳಲ್ಲಿ ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ. ಇನ್ನು 3 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾದರೆ, 1 ಪಂದ್ಯ ಟೈ ಆಗಿತ್ತು.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಜಿ, ಕಗಿಸೊ ರಬಾಡ, ತಬ್ರೇಝ್ ಶಮ್ಸಿ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.