ಕ್ರೀಡೆ

IPL: 5 ಬಿಲಿಯನ್ ಡಾಲರ್ ಹೂಡಿಕೆಗೆ ಮುಂದಾದ ಸೌದಿ ಅರೇಬಿಯಾ!

ನವದೆಹಲಿ: ಇಂಡಿಯನ್​ ಪ್ರೀಮಿಯರ್​ ಲೀಗ್​ (IPL) ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಲೀಗ್ ಆಗಿದ್ದು, ಮೊದಲ ಬಾರಿಗೆ ಇದರ ಆವೃತ್ತಿಯನ್ನು ಬಿಸಿಸಿಐ 2008 ರಲ್ಲಿ ಆಯೋಜಿಸಿತು. ಒಟ್ಟು 16 ಸೀಸನ್​ಗಳನ್ನು ಮುಗಿಸಿರುವ ಐಪಿಎಲ್​ನಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಸೌದಿ ಅರೇಬಿಯಾ ಯೋಜಿಸಿದೆ ಎಂದು ಹೇಳಲಾಗಿದೆ.

ಐಪಿಎಲ್‌ನಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸುತ್ತಿದ್ದು, ಇದು 30 ಬಿಲಿಯನ್ ಡಾಲರ್​ ಮೌಲ್ಯದ್ದಾಗಿದೆ ಮತ್ತು ಲೀಗ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲಿದೆ. ಯುಎಇ ಕ್ರಿಕೆಟ್‌ನಲ್ಲಿ ಹೂಡಿಕೆ ಮಾಡಲು ಉತ್ಸುಕವಾಗಿದೆ ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಹೇಳಿದ್ದಾರೆ.

ಏಕದಿನ ವಿಶ್ವಕಪ್ 2023ರ ಸಂಭ್ರಮದ ನಡುವೆ ಐಪಿಎಲ್​ 2024 ಕುರಿತಂತೆ ಹೊಸ ಅಪ್ಡೇಟ್​ಗಳು ಹೊರಬಿದ್ದಿವೆ. ಸೆಪ್ಟೆಂಬರ್‌ನಲ್ಲಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೌದಿ ಪ್ರತಿನಿಧಿಗಳು ಮತ್ತು ಭಾರತೀಯ ಅಧಿಕಾರಿಗಳ ನಡುವೆ ಈ ಮಾತುಕತೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).