Yash Dayal; ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡದಲ್ಲಿ ವೇಗದ ಬೌಲರ್ ಆಗಿದ್ದ ಯಶ್ ದಯಾಳ್ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಮದುವೆಯ ಭರವಸೆ ನೀಡಿ ಆರ್ಥಿಕ ಮತ್ತು ಮಾನಸಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಗಾಜಿಯಾಬಾದ್‌ನ ಯುವತಿಯೊಬ್ಬರು ದೂರು ನೀಡಿದ್ದಾರೆ.
5 ವರ್ಷಗಳ ಕಾಲ ನನ್ನೊಂದಿಗೆ ಸಂಬಂಧ ಹೊಂದಿದ್ದ ಯಶ್ ದಯಾಳ್, ಮದುವೆಯಾಗುವ ಭರವಸೆ ನೀಡಿದ್ದರು. ಆದರೆ ಈಗ ಅದನ್ನು ಉಲ್ಲಂಘಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ವೇಗದ ಬೌಲರ್ ಯಶ್ ದಯಾಳ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 69 ರ ಅಡಿಯಲ್ಲಿ ಲೈಂಗಿಕ ಶೋಷಣೆ, ದೈಹಿಕ ಹಿಂಸೆ, ಮಾನಸಿಕ ಕಿರುಕುಳ ಮತ್ತು ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದು ಜಾಮೀನು ರಹಿತ ಅಪರಾಧವಾಗಿದ್ದು, ಗರಿಷ್ಠ 10 ವರ್ಷಗಳ ಶಿಕ್ಷೆ ಮತ್ತು ತಕ್ಷಣದ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ; 4.5 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ| Drug-seiz
(ಏಜೆನ್ಸೀಸ್)
ದಯಾಳ್ ವಿರುದ್ಧ ಮದುವೆಯ ನೆಪದಲ್ಲಿ ಶೋಷಣೆ ಮಾಡಿರುವ ಬಗ್ಗೆ ಆರೋಪಿಸಿ ಮುಖ್ಯಮಂತ್ರಿಗಳ ಆನ್‌ಲೈನ್ ದೂರು ಪೋರ್ಟಲ್ ಐಜಿಆರ್‌ಎಸ್‌ನಲ್ಲಿ ಯುವತಿ ದೂರು ದಾಖಲಿಸಿದ್ದರು. ಯಶ್ ದಯಾಳ್ ಕೆಲವು ದಿನಗಳ ಹಿಂದೆ ಮದುವೆಯ ಆಮಿಷವೊಡ್ಡಿ ಆರ್ಥಿಕ, ಮಾನಸಿಕ ಮತ್ತು ದೈಹಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸುದೀರ್ಘ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಯಶ್ ದಯಾಳ್ ಜೊತೆಗಿರುವ ಫೋಟೋವನ್ನು ಶೇರ್ ಮಾಡಿದ್ದರು. ಇದೀಗ ಪ್ರಾಥಮಿಕ ತನಿಖೆಯ ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.