ಕ್ರೀಡೆ

ಇತಿಹಾಸ ಮರುಕಳಿಸಲಿದೆ ಎಂದ ಶೋಯೆಬ್​ ಅಖ್ತರ್​: ಭಾರತೀಯರ ಟ್ರೋಲ್​ಗೆ ಬೆದರಿ ಪೋಸ್ಟ್​ ಡಿಲೀಟ್​

ನವದೆಹಲಿ: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಗುಜರಾತಿನ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್​ ಟೂರ್ನಿಯ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಪಾಕ್​ ದಿಗ್ಗಜ, ಮಾಜಿ ವೇಗಿ ಶೋಯೆಬ್​ ಅಖ್ತರ್​ ಅವರು ಪಂದ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕುವ ಮೂಲಕ ಟ್ರೋಲ್​ ಆಗಿದ್ದಾರೆ.

ತಾವು ಪಾಕ್​ ಪರ ಆಡುತ್ತಿದ್ದಾಗ ವಿಕೆಟ್​ ಪಡೆದು ಸಂಭ್ರಮಿದ ಫೋಟೋವೊಂದನ್ನು ಅಖ್ತರ್​ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ನಾಳೆ ಇತಿಹಾಸ ಮರುಕಳಿಸುತ್ತದೆ ಎಂದು ಅಡಿಬರಹ ನೀಡಿದ್ದರು. ಇದು ಭಾರತೀಯರ ಕಣ್ಣಿಗೆ ಬೀಳುತ್ತಿದ್ದಂತೆ ಇಂಡೋ-ಪಾಕ್​ ನಡುವಿನ ಕ್ರಿಕೆಟ್​ ಇತಿಹಾಸ, ಅದರಲ್ಲೂ ವಿಶ್ವಕಪ್​ ಟೂರ್ನಿಯಲ್ಲಿ ಉಭಯ ದೇಶಗಳ ಸಾಧನೆಯನ್ನು ನೆನಪು ಮಾಡಿ ಅಖ್ತರ್​ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ್ದಾರೆ. ಇದಾದ ಬಳಿಕ ಅಖ್ತರ್​, ಟೆಸ್ಟ್ ಪಂದ್ಯದ ವೇಳೆ ಸಚಿನ್ ತೆಂಡೂಲ್ಕರ್ ಅವರನ್ನು ಔಟ್​ ಮಾಡಿದ ಫೋಟೋವನ್ನು ಪೋಸ್ಟ್ ಮಾಡಿದರು. ಆದರೆ ಟ್ರೋಲ್​ ಮುಂದುವರಿದಂತೆ ಮುಜಗರಕ್ಕೀಡಾದ ಅಖ್ತರ್​ ಜಾಲತಾಣದಿಂದ ಪೋಸ್ಟ್​ ಡಿಲೀಟ್​ ಮಾಡಿದ್ದಾರೆ.

ಇತಿಹಾಸ ಏನು?

ಕ್ರಿಕೆಟ್​ ಹುಟ್ಟುವಿನಿಂದ ಹಿಡಿದು ಇಂದಿನವರೆಗೂ ಇಂಡೋ-ಪಾಕ್​ ಕದನ ರೋಚಕತೆ ಕಾಯ್ದುಕೊಂಡಿದೆ. ಅದರಲ್ಲೂ ವಿಶ್ವಕಪ್​ ಕದನಗಳ ಬಗ್ಗೆಯಂತೂ ಹೇಳತೀರದು, ಐಸಿಸಿ ಟಿ20 ಮತ್ತು ಏಕದಿನ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಒಟ್ಟು 14 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಗಮನಾರ್ಹ ಸಂಗತಿ ಏನೆಂದರೆ, ಏಕದಿನ ವಿಶ್ವಕಪ್​ನಲ್ಲಿ ಏಳು ಬಾರಿಯೂ ಭಾರತವೇ ವಿಜಯೋತ್ಸವ ಆಚರಿಸಿದೆ. ಟಿ20 ವಿಶ್ವಕಪ್​ನಲ್ಲಿಯೂ 7 ಬಾರಿ ಉಭಯ ತಂಡಗಳು ಸೆಣಸಾಡಿದ್ದು, ಪಾಕಿಸ್ತಾನ 2021ರಲ್ಲಿ ಒಂದು ಬಾರಿ ಮಾತ್ರ ಗೆಲುವು ದಾಖಲಿಸಿದೆ. ಎರಡು ಮಾದರಿಯಲ್ಲೂ ಭಾರತವೇ ಪಾರುಪತ್ಯ ಸಾಧಿಸಿದೆ. ಆದರೆ, ಅಖ್ತರ್​ ಇತಿಹಾರ ಮರುಕಳಿಸುತ್ತದೆ ಎಂದು ಪೋಸ್ಟ್​ ಮಾಡಿರುವು ಹಾಸ್ಯಾಸ್ಪದದಂತೆ ತೋರುತ್ತದೆ.

ಇಂದು ಮಧ್ಯಾಹ್ನ ದಾಯಾದಿಗಳ ಕ್ರಿಕೆಟ್​ ಕದನ ನಡೆಯಲಿದೆ. ವಿಶ್ವಕಪ್​ಗೂ ಮುನ್ನ ನಡೆದ ಏಷ್ಯಾ ಕಪ್​ನಲ್ಲಿ ಇಂಡೋ-ಪಾಕ್​ ಎರಡು ಬಾರಿ ಮುಖಾಮುಖಿಯಾದವು. ಇದರಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಇನ್ನೊಂದು ಪಂದ್ಯದಲ್ಲಿ ಭಾರತ, ಪಾಕ್​ ವಿರುದ್ಧ ಅಮೋಘ ಜಯ ದಾಖಲಿಸಿತು. ಇನ್ನು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿವೆ ಉಭಯ ತಂಡಗಳಿಗೆ ಇಂದು ನಡೆಯಲಿರುವ ಪಂದ್ಯ ಮೂರನೇ ಪಂದ್ಯವಾಗಿದ್ದು, ಹ್ಯಾಟ್ರಿಕ್​ ಗೆಲುವು ಯಾರಿಗೆ ಲಭಿಸಲಿದೆ ಎಂದು ನೋಡಬೇಕಿದೆ.

ಟೀಮ್​ ಇಂಡಿಯಾ ಅಭಿಮಾನಿಗಳಿಗೆ ವಿರಾಟ್​ ಕೊಹ್ಲಿ, ನಾಯಕ ರೋಹಿತ್​ ಶರ್ಮ, ಜಸ್ಪ್ರೀತ್​ ಬೂಮ್ರಾ, ಕೆ ಎಲ್​ ರಾಹುಲ್​ ಮತ್ತು ಮೊಹಮ್ಮದ್​ ಸಿರಾಜ್​ ಅವರ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲದೆ, ಶುಭಮನ್​ ಗಿಲ್​ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದು, ತಂಡಕ್ಕೆ

ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್​ ಕೀಪರ್​), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ವಾಸಿಂ. (ಏಜೆನ್ಸೀಸ್​)