ನವದೆಹಲಿ: ಸೇಂಟ್ ಜಾರ್ಜ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ (India) ಹಾಗೂ ದಕ್ಷಿಣ ಆಫ್ರಿಕಾ (South Africa) ನಡುವಿನ ಟಿ20 ಸರಣಿಯ (T20 Series) ಎರಡನೇ ಪಂದ್ಯದಲ್ಲಿ ಆತಿಥೇಯರು ಟಾಸ್ ಗೆದ್ದು ಪ್ರವಾಸಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ. 1-0 ಅಂತರದಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಭಾರತ ಎರಡನೇ ಪಂದ್ಯದಲ್ಲೂ ಗೆದ್ದು ತನ್ನ ಪಾರುಪತ್ಯವನ್ನು ಮುಂದುವರೆಸಲು ಸಜ್ಜಾಗಿದೆ.
ಮೊದಲನೇ ಪಂದ್ಯದಂತೆ ಎರಡನೇ ಮ್ಯಾಚ್ನಲ್ಲೂ ಟೀಮ್ ಇಂಡಿಯಾ (Team India) ಟಾಸ್ ಸೋತಿದ್ದು, ಮೊದಲು ಬ್ಯಾಟಿಂಗ್ಗೆ ಇಳಿಯಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಹೊರಬಿದ್ದಿದ್ದು, ದಕ್ಷಿಣ ಆಫ್ರಿಕಾ (South Africa) ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕ್ರುಗರ್ ಬದಲಿಗೆ ರೀಜಾ ಹೆಂಡ್ರಿಕ್ಸ್‌ಗೆ ಅವಕಾಶ ನೀಡಲಾಗಿದೆ. ಉಳಿದಂತೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅವೇಶ್ ಖಾನ್.
ದಕ್ಷಿಣ ಆಫ್ರಿಕಾ: ಏಡೆನ್ ಮಾರ್ಕ್ರಾಮ್ (ನಾಯಕ), ರಿಯಾನ್ ರಿಕಲ್ಟನ್, ರೀಜಾ ಹೆಂಡ್ರಿಕ್ಸ್, ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಆಂಡಿಲ್ ಸಿಮೆಲೇನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಪೀಟರ್.