ಕ್ರೀಡೆ

ಬೆಂಗಳೂರಲ್ಲಿ ನಾಳೆಯೇ ಆರ್​ಸಿಬಿ ಪಂದ್ಯ; IPL ಪಂದ್ಯಕ್ಕಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ವಿಶೇಷ ವ್ಯವಸ್ಥೆ

ಬೆಂಗಳೂರು: ( ipl ) ಇಂಡಿಯನ್ ಪ್ರೀಮಿಯರ್ ಲೀಗ್  ಸೀಸನ್ 18 ರಲ್ಲಿ ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್‌ ತಂಡಗಳು ಮಧ್ಯೆ ಹಣಾಹಣಿ ನಡೆಯಲಿದೆ. ಐಪಿಎಲ್ ಪಂದ್ಯಕ್ಕಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪಂದ್ಯಕ್ಕೆ ಬರುವವರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂನ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್‌ಗೆ ಅವಕಾಶ ಇರುವುದಿಲ್ಲ. ಮ್ಯಾಚ್ ನೋಡಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತ ಮುತ್ತ ವಾಹನಗಳ ನಿಲುಗಡೆ ಸ್ಥಳ ಕೊರತೆ ಇರುವುದರಿಂದ ನಾಳೆ ಆ ಭಾಗದಲ್ಲಿ ಓಡಾಡುವ ಜನರು ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಲಾಗಿದೆ. ಇನ್ನು ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಟ್ರಾಪ್ ಮಾಡಲು ಸ್ಥಳ ನಿಗದಿ ಮಾಡಲಾಗಿದೆ.

ಪಾರ್ಕಿಂಗ್​ ಅವಕಾಶ:

  • ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  • ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ಇದೆ.
  • ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

ವಾಹನಗಳ ನಿಲುಗಡೆ ನಿಷೇಧ

  • ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
  • ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
  • ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ
  • ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ