ಕ್ರೀಡೆ

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಿಕೋಲಸ್ ಪೂರನ್ ಬಾರಿಸಿದ ಸಿಕ್ಸರ್​ಗೆ ಅಭಿಮಾನಿಯ ಹಣೆ ಓಪನ್..IPL

IPL : ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇಂಡಿಯನ್ ಪ್ರೀಮಿಯರ್ ಲೀಗ್​ನ 26ನೇ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಬ್ಯಾಟರ್ ನಿಕೋಲಸ್ ಪೂರನ್ ಬಾರಿಸಿದ ಸಿಕ್ಸ್​ನಿಂದಾಗಿ ಅಭಿಮಾನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಗುಜರಾತ್ ಟೈಟಾನ್ಸ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು.

181 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಚಿತ್ರಣ ಬದಲಿಸಿದ್ದು ನಿಕೋಲಸ್ ಪೂರನ್. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೂರನ್ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 1 ಫೋರ್​​ನೊಂದಿಗೆ 61 ರನ್ ಬಾರಿಸಿದ್ದರು.

ಈ ಏಳು ಸಿಕ್ಸರ್​ಗಳಲ್ಲಿ  ಒಂದು ಸಿಕ್ಸ್ ನೇರವಾಗಿ ಸ್ಟೇಡಿಯಂನಲ್ಲಿ ಕೂತಿದ್ದ ವ್ಯಕ್ತಿ ಹಣೆಗೆ ಹೋಗಿ ಬಡಿದಿದೆ.  ತಕ್ಷಣವೇ ಸ್ಟೇಡಿಯಂ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸೆ ಒದಗಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೀಗ ಗಂಭೀರವಾಗಿ ಗಾಯಗೊಂಡಿರುವ ಅಭಿಮಾನಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.