ಬೆಂಗಳೂರು ರಾಜ್ಯ ಮತ್ತು ರಾಷ್ಟ್ರಮಟ್ಟವನ್ನು ಪ್ರತಿನಿಧಿಸುವ ವಿದ್ಯಾರ್ಥಿಗಳಿಗೆ ಮಾತ್ರ ಮುಂದಿನ ಶೈಕ್ಷಣಿಕ ಸಾಲಿನಿಂದ ಕ್ರೀಡಾ ಕೋಟಾದಲ್ಲಿ ಪರಿಗಣಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಉಭಯ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ವೃತ್ತಿ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ಕ್ರೀಡಾ ಕೋಟಾದ ನಿಯಮಗಳನ್ನು ಪರಿಷ್ಕರಿಸಲಾಗಿದೆ. ಈಗಾಗಲೇ ಈ ವರ್ಷದ ಪ್ರಕ್ರಿಯೆ ಬಹುತೇಕ ಕೊನೆಯ ಘಟ್ಟಕ್ಕೆ ಬಂದಿರುವುದರಿಂದ ಮುಂದಿನ ವರ್ಷದಿಂದ ಈ ನಿಯಮ ಅನ್ವಯವಾಗಲಿದೆ.