ಕ್ರೀಡೆ

ಬಾಂಗ್ಲಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಪಡೆದ ಮಿಂಚಿನ ವೇಗಿ

ಬೆಂಗಳೂರು: ಐಪಿಎಲ್ 17ನೇ ಆವೃತ್ತಿಯಲ್ಲಿ ಮಿಂಚಿನ ವೇಗದ ದಾಳಿಯೊಂದಿಗೆ ಗಮನಸೆಳೆದ ದೆಹಲಿಯ ವೇಗಿ ಮಯಾಂಕ್ ಯಾದವ್ ಭಾರತ ಟಿ20 ತಂಡದಲ್ಲಿ ಚೊಚ್ಚಲ ಬಾರಿಗೆ ಸ್ಥಾನ ಪಡೆದಿದ್ದಾರೆ. ಕ್ರಮವಾಗಿ ಅ.6, 9, 12ರಂದು ಪ್ರವಾಸಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಶನಿವಾರ 15 ಆಟಗಾರರ ಭಾರತ ತಂಡವನ್ನು ಹೆಸರಿಸಿದೆ.

ಪ್ರಸ್ತುತ ಟೆಸ್ಟ್ ತಂಡದಲ್ಲಿರುವ ಶುಭಮಾನ್ ಗಿಲ್, ಯಶಸ್ವಿ ಜೈಸ್ವಾಲ್‌ಗೆ ವಿಶ್ರಾಂತಿ ನೀಡಲಾಗಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ವಿರಾಮದ ಬಳಿಕ ತಂಡಕ್ಕೆ ಮರಳಿದ್ದಾರೆ. ತಮಿಳುನಾಡಿನ ಸ್ಪಿನ್ನರ್ ವರುಣ್ ಚಕ್ರವರ್ತಿ ಮರಳಿ ಸ್ಥಾನ ಪಡೆದಿದ್ದಾರೆ. ಮೊದಲ ಪಂದ್ಯ ಗ್ವಾಲಿಯರ್‌ನಲ್ಲಿ ನಡೆಯಲಿದ್ದು, ಅ.9 ಹಾಗೂ 12 ರಂದು ಉಳಿದೆರಡು ಪಂದ್ಯಗಳು ಕ್ರಮವಾಗಿ ನವದೆಹಲಿ,ಹೈದರಾಬಾದ್‌ನಲ್ಲಿ ನಿಗದಿಯಾಗಿವೆ.

ತಂಡ: ಸೂರ್ಯಕುಮಾರ್ (ನಾಯಕ), ಅಭಿಷೇಕ್ ಶರ್ಮ, ಸಂಜು ಸ್ಯಾಮ್ಸನ್ (ವಿ.ಕೀ), ಜತೇಶ್ ಶರ್ಮ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ರಿಯಾನ್ ಪರಾಗ್, ನಿತಿಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.