ಕ್ರೀಡೆ

ಟಿ-20 ವಿಶ್ವಕಪ್​​ಗೆ ಭಾರತದ ತಂಡ ಪ್ರಕಟ: ಜಸ್ಪ್ರೀತ್ ಬುಮ್ರಾ ಮರಳಿ ಅಖಾಡಕ್ಕೆ...

Bengaluru - General - Rama Kishan K V

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಕನ್ನಡಿಗ ಕೆ.ಎಲ್. ರಾಹುಲ್​​ಗೆ ಉಪನಾಯಕನ ಜವಾಬ್ದಾರಿ ವಹಿಸಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಹರ್ಶದೀಪ್ ಸಿಂಗ್.

ಗಾಯದಿಂದಾಗಿ ಏಷ್ಯಾಕಪ್​ನಿಂದ ಹಿಂದೆ ಸರಿದಿದ್ದ ತಂಡದ ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಫಿಟ್ ಆಗಿದ್ದು, ಟಿ-20 ವಿಶ್ವಕಪ್​ ತಂಡವನ್ನು ಸೇರಿಕೊಂಡಿದ್ದಾರೆ. (ಏಜೆನ್ಸೀಸ್)