ಪ್ರೊವಿಡೆನ್ಸ್: ನಾಯಕ ರೋಹಿತ್ ಶರ್ಮಾ ಅವರ (57 ರನ್, 39 ಎಸೆತ, 2 ಸಿಕ್ಸರ್, 6 ಫೋರ್) ಹಾಗು ಸೂರ್ಯಕುಮಾರ್ (47 ರನ್, 36 ಎಸೆತ, 2 ಸಿಕ್ಸರ್, 4 ಫೋರ್) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ 2 ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.
ಇಲ್ಲಿನ ಪ್ರೊವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಆಹ್ವಾನ ಪಡೆದ ಟೀಂ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತು.
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್ಗಳಲ್ಲಿ ಅಂತಿಮವಾಗಿ 101 ರನ್ಗೆ ಆಲೌಟ್ ಆಗಿದೆ. ಇದೀಗ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ.