ಅಮೆರಿಕಾ: ಇಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಗೆಲುವಿಗಾಗಿ ಸಮರ ಸಾರುತ್ತಿದ್ದು, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಪಾಕ್, ಭಾರತಕ್ಕೆ ಬ್ಯಾಟ್ ಮಾಡುವಂತೆ ಆಹ್ವಾನಿಸಿತು.
ಮೊದಲು ಬ್ಯಾಟ್ಗೆ ಬಂದ ಟೀಂ ಇಂಡಿಯಾಗೆ ಆರಂಭಿಕ ಹಂತದಲ್ಲೇ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ವಿಕೆಟ್ ಪತನವಾಗಿದ್ದು, ಭಾರೀ ಆಘಾತ ತಂದೊಡ್ಡಿತು. ಇದರ ಬೆನ್ನಲ್ಲೇ ಕ್ರೀಸ್ನಲ್ಲಿ ಹೆಚ್ಚು ನಿಲ್ಲದ ಇತರೆ ಬ್ಯಾಟ್ಸ್ಮನ್ಗಳು, ಪಾಕಿಸ್ತಾನ ಬೌಲರ್ಗಳಿಗೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿ, ಪೆವಿಲಿಯನ್ನತ್ತ ಮುಖಮಾಡಿದರು.
19 ಓವರ್ ಅಂತ್ಯಕ್ಕೆ ಟೀಂ ಇಂಡಿಯಾ 119ಕ್ಕೆ ಆಲ್ಔಟ್ ಆಗಿದೆ.